Wednesday, 8th January 2025

Champions Trophy: ಸಂಜು ಸ್ಯಾಮ್ಸನ್‌ಗೆ ಮತ್ತೆ ಅನ್ಯಾಯ? ವಿಕೆಟ್‌ ಕೀಪರ್‌ ಸ್ಥಾನಕ್ಕೆ ಕನ್ನಡಿಗ!

Wicket Keeper Sanju Samson highly unlikely in Team India squad for IND vs ENG ODIs and Champions Trophy

ನವದೆಹಲಿ: ಮುಂಬರುವ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy) ಹಾಗೂ ಇಂಗ್ಲೆಂಡ್‌ ವಿರುದ್ದದ ವೈಟ್‌ ಬಾಲ್‌ ಸರಣಿಗಳಿಗೆ ಭಾರತ ತಂಡವನ್ನು ಇನ್ನು ಕೆಲವೇ ದಿನಗಳಲ್ಲಿಯೇ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಲಿದೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಜನವರಿ 12ರಂದು ತಂಡಗಳನ್ನು ಪ್ರಕಟಿಸಲು ಕೊನೆಯ ದಿನಾಂಕವಾಗಿದೆ. ಇದರ ನಡುವೆ ಕೇರಳ ಮೂಲದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌ಗೆ ಕಹಿ ಸುದ್ದಿಯೊಂದು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ವರದಿಯಾಗಿದೆ.

ಭಾರತ ಟಿ20 ತಂಡದಲ್ಲಿ ಸಂಜು ಸ್ಯಾಮ್ಸನ್‌ ಅವರು ನಿಯಮಿತವಾಗಿ ಇನಿಂಗ್ಸ್‌ ಆರಂಭಿಸುತ್ತಿದ್ದಾರೆ. ಕಳೆದ ಟಿ20 ಸರಣಿಯಲ್ಲಿಯೂ ಅವರು ಸತತ ಶತಕಗಳನ್ನು ಸಿಡಿಸಿದ್ದರು. ಅದರಂತೆ ಇಂಗ್ಲೆಂಡ್‌ ವಿರುದ್ಧ ಮುಂದಿನ ಐದು ಪಂದ್ಯಗಳ ಟಿ20 ಸರಣಿಯ ಭಾರತ ತಂಡದಲ್ಲಿಯೂ ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ. ಆದರೆ, ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿ ಹಾಗೂ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಭಾರತ ತಂಡದಲ್ಲಿ ಅವರಿಗೆ ಅವಕಾಶ ನೀಡುವುದು ಬಹುತೇಕ ಅನುಮಾನವಿದೆ.

ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಸಂಜು ಸ್ಯಾಮ್ಸನ್‌ ಇಲ್ಲ

ಭಾರತ ತಂಡದ ವಿಕೆಟ್‌ ಕೀಪರ್‌ ಸ್ಥಾನವನ್ನು ತುಂಬಲಾಗಿದೆ. ಭಾರತ ಏಕದಿನ ತಂಡದಲ್ಲಿ ರಿಷಭ್‌ ಪಂತ್‌ ಅವರ ಬದಲು ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಆಗಿ ಕೆಎಲ್‌ ರಾಹುಲ್‌ ಅವರನ್ನು ಆರಿಸಲಾಗುತ್ತದೆ. ಆದರೆ, ಎರಡನೇ ಆಯ್ಕೆಯ ವಿಕೆಟ್‌ ಕೀಪರ್‌ ಆಗಿ ಪಂತ್‌ ಉಳಿಯಬಹುದು. ಆದರೆ, ಸಂಜು ಸ್ಯಾಮ್ಸನ್‌ ಇಂಗ್ಲೆಂಡ್‌ ವಿರುದ್ದ ಟಿ20ಐ ಸರಣಿಯಲ್ಲಿ ಮಾತ್ರ ಆಡಬಹುದು. ಆದರೆ, ಭಾರತ ಏಕದಿನ ತಂಡದ ಪ್ಲೇಯಿಂಗ್‌ XIನಲ್ಲಿ ಸಂಜು ಸ್ಯಾಮ್ಸನ್‌ಗೆ ಸ್ಥಾನವಿಲ್ಲ. ಕಳೆದ ಎರಡು ವರ್ಷಗಳಿಂದ ಸಂಜು ಸ್ಯಾಮ್ಸನ್‌ ಒಡಿಐ ಕ್ರಿಕೆಟ್‌ನಲ್ಲಿ 45ರ ಸರಾಸರಿಯಲ್ಲಿ ರನ್‌ ಗಳಿಸಿದ್ದಾರೆ. ಒಟ್ಟು ಆಡಿರುವ 16 ಏಕದಿನ ಪಂದ್ಯಗಳಿಂದ ಅವರು 56.66ರ ಸರಾಸರಿಯಲ್ಲಿ ರನ್‌ ಗಳಿಸಿದ್ದಾರೆ. ಕಳೆದ ಮೂರು ಪಂದ್ಯಗಳಿಂದ ಅವರು ಒಂದು ಶತಕ ಹಾಗೂ ಒಂದು ಅರ್ಧಶತಕವನ್ನು ಬಾರಿಸಿದ್ದಾರೆ. ಆದರೂ ಏಕದಿನ ತಂಡದಲ್ಲಿ ಕಾಯಂ ಸ್ಥಾನ ಸಿಕ್ಕಿಲ್ಲ.

ಆದರೆ, ಭಾರತ ಟಿ20ಐ ತಂಡದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಇದೀಗ ಇಂಗ್ಲೆಂಡ್‌ ವಿರುದ್ದದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ, ಸಂಜು ಸ್ಯಾಮ್ಸನ್‌ ಅವರನ್ನು ಏಕದಿನ ತಂಡದಲ್ಲಿ ಸ್ಥಾನ ನೀಡಬಹುದು. ಆದರೆ, ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್‌ ಇರುವ ಕಾರಣ ಸಂಜು ಸ್ಯಾಮ್ಸನ್‌ಗೆ ಏಕದಿನ ತಂಡದ ಪ್ಲೇಯಿಂಗ್‌ XIನಲ್ಲಿ ಆಡಿಸುವುದು ಅನುಮಾನ.

ಈ ಸುದ್ದಿಯನ್ನು ಓದಿ: Champions Trophy: ಆಪ್ಘಾನ್‌ ವಿರುದ್ಧದ ಪಂದ್ಯ ಬಹಿಷ್ಕಾರ ಮನವಿ ತಿರಸ್ಕರಿಸಿದ ಇಸಿಬಿ

Leave a Reply

Your email address will not be published. Required fields are marked *