IND vs WI 2nd Test: 2ನೇ ಟೆಸ್ಟ್‌ಗೆ ಬುಮ್ರಾ, ಸಿರಾಜ್‌ಗೆ ರೆಸ್ಟ್
ಮೊದಲ ಪಂದ್ಯ ಎರಡೂವರೆ ದಿನಗಳಲ್ಲೇ ಕೊನೆಗೊಂಡಿತ್ತು. ಹುಲ್ಲು ಬೆಳೆದಿದ್ದ ಕೆಂಪು ಮಣ್ಣಿನ ಪಿಚ್‌ನಲ್ಲಿ ಹೆಚ್ಚಿನ ಬೌನ್ಸ್ ಕಂಡುಬಂದಿದ್ದು, ಜಸ್‌ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮೊದಲ ದಿನವೇ ಮಾರಕ ದಾಳಿ ನಡೆಸಿದ್ದರು. ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 140 ರನ್‌ಗಳ ಅಂತರದಲ್ಲಿ ಬೃಹತ್ ಗೆಲುವು ಸಾಧಿಸಿತ್ತು.

-

ನವದೆಹಲಿ: ಕಾರ್ಯದೊತ್ತಡ ನಿರ್ವಹಣೆ ಕಾರಣಕ್ಕಾಗಿ ವೇಗಿಗಳಾದ ಜಸ್‌ಪ್ರೀತ್ ಬುಮ್ರಾ(Jasprit Bumrah) ಅಥವಾ ಮೊಹಮ್ಮದ್ ಸಿರಾಜ್‌ಗೆ 2ನೇ ಟೆಸ್ಟ್(IND vs WI 2nd Test) ಪಂದ್ಯದಿಂದ ವಿಶ್ರಾಂತಿ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ. ಆಸ್ಟ್ರೇಲಿಯಾ ಏಕದಿನ ಸರಣಿಯ ಭಾಗವಾಗಿರುವ ಸಿರಾಜ್‌ಗೆ(Mohammed Siraj) ಈ ಪಂದ್ಯಕ್ಕೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚು.
ಬೆಂಚ್ ಸ್ಟ್ರೆಂತ್ ಪರೀಸುವ ಸಲುವಾಗಿ ಕನ್ನಡಿಗರಾದ ವೇಗಿ ಪ್ರಸಿದ್ಧ ಕೃಷ್ಣ ಮತ್ತು ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ಗೆ ಅವಕಾಶ ನೀಡುವ ಸಾಧ್ಯತೆಯೂ ಕಾಣಿಸಿದೆ. ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ 'ಎ' ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ 'ಎ' ಪರ ಪಡಿಕ್ಕಲ್ ಮಿಂಚಿದ್ದರು. 150 ರನ್ ಗಳಿಸಿ ಪಡಿಕ್ಕಲ್ ಭಾರತದ ಟಾಪ್ ಸ್ಕೋರರ್ ಆಗಿದ್ದರು. ಸಿರಾಜ್‌ಗೆ ರೆಸ್ಟ್ ನೀಡಿದರೆ ಆಗ ಪ್ರಸಿದ್ಧಕೃಷ್ಣಗೆ ಅವಕಾಶ ಕಲ್ಪಿಸುವುದು ಸುಲಭವಾಗಲಿದೆ.
ಆಸೀಸ್ ಸರಣಿಗೆ ಆಯ್ಕೆಯಾಗದ ಆಲ್ರೌಂಡರ್ ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಿ ಪಡಿಕ್ಕಲ್ಗೆ ಸ್ಥಾನ ಕಲ್ಪಿಸುವ ಸಾಧ್ಯತೆಯೂ ಇದೆ. ಕಾರ್ಯದೊತ್ತಡ ಕಾರಣಕ್ಕೆ ವೇಗಿ ಬೂಮ್ರಾಗೆ ಆಸೀಸ್ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಕೇವಲ ಟಿ20 ಸರಣಿಗಷ್ಟೇ ಅವರನ್ನು ಪರಿಗಣಿಸಲಾಗಿದೆ.
ಎರಡನೇ ಟೆಸ್ಟ್ ಪಂದ್ಯಕ್ಕೆ ಬ್ಯಾಟಿಂಗ್ ಸ್ನೇಹಿ ಪಿಚ್ ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಹೀಗಾಗಿ ಪಂದ್ಯದಲ್ಲಿ ದೊಡ್ಡ ಮೊತ್ತ ದಾಖಲಾಗುವ ನಿರೀಕ್ಷೆಯಿದೆ. ಆದರೆ, ಕ್ರಮೇಣ ಪಿಚ್ ಒಣಗುವುದರಿಂದ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ಸಾಧಿಸುವ ಸಾಧ್ಯತೆಯೂ ಇದೆ.
ಇದನ್ನೂ ಓದಿ IND vs SA: ಇಂದು ಭಾರತ-ದಕ್ಷಿಣ ಆಫ್ರಿಕಾ ಕಾದಾಟ; ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿ ಕೌರ್ ಪಡೆ
ಮೊದಲ ಪಂದ್ಯ ಎರಡೂವರೆ ದಿನಗಳಲ್ಲೇ ಕೊನೆಗೊಂಡಿತ್ತು. ಹುಲ್ಲು ಬೆಳೆದಿದ್ದ ಕೆಂಪು ಮಣ್ಣಿನ ಪಿಚ್‌ನಲ್ಲಿ ಹೆಚ್ಚಿನ ಬೌನ್ಸ್ ಕಂಡುಬಂದಿದ್ದು, ಜಸ್‌ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮೊದಲ ದಿನವೇ ಮಾರಕ ದಾಳಿ ನಡೆಸಿದ್ದರು. ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 140 ರನ್‌ಗಳ ಅಂತರದಲ್ಲಿ ಬೃಹತ್ ಗೆಲುವು ಸಾಧಿಸಿತ್ತು.