Saturday, 14th December 2024

ಮೇಘಾಲಯದಲ್ಲಿ ಭೂಕುಸಿತ: ಮಹಿಳಾ ಕ್ರಿಕೆಟರ್‌ ಸಾವು

ಶಿಲ್ಲಾಂಗ್: ಮೇಘಾಲಯ ರಾಜ್ಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಉಂಟಾದ ಭೂಕುಸಿತದಲ್ಲಿ ಮಹಿಳಾ ಕ್ರಿಕೆಟಿಗ ರಜಿಯಾ ಅಹ್ಮದ್ ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಮಾವ್ನಿ ಪ್ರದೇಶದಲ್ಲಿ ಬೆಳಿಗ್ಗೆ ಭೂಕುಸಿತ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಹಲವು ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಿಗಳಲ್ಲಿ ಮೇಘಾಲಯ ಪರ ಆಡಿದ್ದ ರಜಿಯಾ ಅವರ ಮೃತದೇಹವನ್ನು ಅವಶೇಷಗಳಡಿಯಿಂದ ಪತ್ತೆ ಹಚ್ಚಲಾಗಿದೆ. ಇನ್ನೂ ಐವರು ನಾಪತ್ತೆಯಾಗಿ ದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ತಂಡ ಮತ್ತು ಗೃಹ ರಕ್ಷಕ ದಳಗಳು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗುತ್ತವೆ ಎಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಲ್ವೆಸ್ಟರ್ ನೊಂಗ್ಟಿಂಗರ್ ತಿಳಿಸಿದ್ದಾರೆ.