Women's World Cup: ಮಹಿಳಾ ವಿಶ್ವಕಪ್ ಪಂದ್ಯ ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸಿದ ಐಸಿಸಿ
ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯುತ್ತಿರುವ ಕಾರಣ ಪಾಕಿಸ್ತಾನ ಫೈನಲ್ ತಲುಪದಿದ್ದರೆ, ನವಿ ಮುಂಬೈನಲ್ಲಿ ಫೈನಲ್ ನಡೆಯಲಿದೆ. ಪಾಕಿಸ್ತಾನ ಅರ್ಹತೆ ಪಡೆದರೆ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣ ಫೈನಲ್ ಅನ್ನು ಆಯೋಜಿಸುತ್ತದೆ. ಪಂದ್ಯದ ತಾಣ ಬದಲಾವಣೆ ಮಾಡಲಾಗಿದ್ದರೂ, ಮೂಲ ವೇಳಾಪಟ್ಟಿಯಂತೆ ಪಂದ್ಯಗಳು ನಡೆಯಲಿದೆ. ಪಂದ್ಯಗಳ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.


ನವದೆಹಲಿ: ಮುಂಬರುವ ಮಹಿಳಾ ಏಕದಿನ ವಿಶ್ವಕಪ್‌ನ(Women's World Cup 2025) ಸ್ಥಳ ಬದಲಾವಣೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನಿಲ್ (ಐಸಿಸಿ) ಶುಕ್ರವಾರ ದೃಢಪಡಿಸಿದೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐದು ಪಂದ್ಯಗಳು, ಟೂರ್ನಿಯ ಉದ್ಘಾಟನಾ ಪಂದ್ಯ ಮತ್ತು ಸಂಭಾವ್ಯ ಫೈನಲ್ ಪಂದ್ಯವನ್ನು ನವಿ ಮುಂಬೈನ ಡಿವೈ ಪಾಟೀಲ್(Navi Mumbai's DY Patil Stadium) ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ಜೂನ್‌ನಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದlಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಬಳಿಕ ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ಕ್ರಿಕೆಟ್ ಸಂಸ್ಥೆಯು ರಾಜ್ಯ ಪೊಲೀಸರಿಂದ ಅಗತ್ಯ ಅನುಮೋದನೆಗಳನ್ನು ಪಡೆಯುವಲ್ಲಿ ವಿಫಲವಾದ ಕಾರಣ ಸ್ಥಳ ಬದಲಾವಣೆ ಮಾಡಲಾಗಿದೆ.
"ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಲಭ್ಯತೆ ಇಲ್ಲದ ಕಾರಣ ಸೆಪ್ಟೆಂಬರ್ 30 ರಂದು ಪ್ರಾರಂಭವಾಗುವ ಎಂಟು ತಂಡಗಳ ಟೂರ್ನಮೆಂಟ್‌ನ ಐದು ಸ್ಥಳಗಳಲ್ಲಿ ಬೆಂಗಳೂರಿನ ಬದಲಿಗೆ ನವಿ ಮುಂಬೈ ಸ್ಥಾನ ಪಡೆದಿದೆ" ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಪಂದ್ಯಗಳ ತಾಣ ಬದಲಾವಣೆ ಮಾಡಲಾಗಿದ್ದರೂ, ಮೂಲ ವೇಳಾಪಟ್ಟಿಯಂತೆ ಪಂದ್ಯಗಳು ನಡೆಯಲಿದೆ. ಪಂದ್ಯಗಳ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಇದನ್ನೂ ಓದಿ ಮಹಿಳಾ ವಿಶ್ವಕಪ್‌ಗೂ ಮುನ್ನ ಕೌರ್ ಪಡೆಗೆ ವಿಶಾಖಪಟ್ಟಣದಲ್ಲಿ ಪೂರ್ವಸಿದ್ಧತಾ ಶಿಬಿರ
ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯುತ್ತಿರುವ ಕಾರಣ ಪಾಕಿಸ್ತಾನ ಫೈನಲ್ ತಲುಪದಿದ್ದರೆ, ನವಿ ಮುಂಬೈನಲ್ಲಿ ಫೈನಲ್ ನಡೆಯಲಿದೆ. ಪಾಕಿಸ್ತಾನ ಅರ್ಹತೆ ಪಡೆದರೆ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣ ಫೈನಲ್ ಅನ್ನು ಆಯೋಜಿಸುತ್ತದೆ.