ಮಹಿಳಾ ವಿಶ್ವಕಪ್ ಅಭ್ಯಾಸ ಪಂದ್ಯದ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಇಂಗ್ಲೆಂಡ್ ಮೊದಲ ಎದುರಾಳಿ
Women’s World Cup: 12 ವರ್ಷಗಳಲ್ಲಿ ಮೊದಲ ಬಾರಿಗೆ ದೇಶವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದರಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತವನ್ನು ಒಳಗೊಂಡ ವಿಶ್ವಕಪ್ ಆರಂಭವಾಗಲಿದೆ. ಬೆಂಗಳೂರು, ಗುವಾಹಟಿ, ಇಂದೋರ್ ಮತ್ತು ವಿಶಾಖಪಟ್ಟಣಂನಲ್ಲಿ ಪಂದ್ಯಗಳು ನಡೆಯಲಿವೆ.


ನವದೆಹಲಿ: ಇದೇ ವರ್ಷದ ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ಭಾರತ ಮತ್ತು ಶ್ರೀಲಂಕಾದ ಐದು ಸ್ಥಳಗಳಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್‌ಗೆ(Women’s World Cup) ಮೊದಲು ನಡೆಯಲಿರುವ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಭಾರತ ತಂಡ ಎರಡು ಅಭ್ಯಾಸ ಪಂದ್ಯ ಆಡಲಿದೆ. ಎದುರಾಳಿ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್. ಇದು 13 ನೇ ಮಹಿಳಾ ವಿಶ್ವಕಪ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್ ನಡೆದಿತ್ತು.
ಭಾರತ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಸೆಪ್ಟೆಂಬರ್ 25 ರಂದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನ 1 ರಲ್ಲಿ ಇಂಗ್ಲೆಂಡ್ ವಿರುದ್ಧ, ನಂತರ ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿರುವ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಒಂದೇ ಅಭ್ಯಾಸ ಪಂದ್ಯ ಆಡಲಿದೆ. ಸೆಪ್ಟೆಂಬರ್ 25 ರಿಂದ 29 ರವರೆಗೆ ಅಭ್ಯಾಸ ಪಂದ್ಯಗಳು ನಡೆಯಲಿದೆ. ಪಾಕಿಸ್ತಾನ ತನ್ನ ಪಾಲಿನ ಪಂದ್ಯವನ್ನು ತಟಸ್ಥ ತಾಣವಾದ ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಆಡಲಿದೆ.
ಈ ವರ್ಷದ ಆರಂಭದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆ ಭಾರತ ತಂಡ, ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿತ್ತು. ಈ ವೇಳೆ ಪುರುಷರ ಮತ್ತು ಮಹಿಳಾ ವಿಭಾಗದ ಪ್ರಮುಖ ಟೂರ್ನಿಗಳಿಗೆ ಹೈಬ್ರಿಡ್ ಮಾದರಿ ಅನುಸರಿಸಲು ಉಭಯ ತಂಡಗಳು ಒಪ್ಪಿಕೊಂಡಿದ್ದು, ಇದರ ಅನ್ವಯ ಭಾರತ ಆತಿಥ್ಯ ವಹಿಸಿರುವ ಈ ಟೂರ್ನಿಗೆ ಕೊಲಂಬೊವನ್ನು ತಟಸ್ಥ ತಾಣವಾಗಿ ಆಯ್ಕೆ ಮಾಡಲಾಗಿದೆ. ಪಾಕಿಸ್ತಾನ ತನ್ನ ಎಲ್ಲ ಪಂದ್ಯಗಳನ್ನು ಇಲ್ಲಿ ಆಡಲಿದೆ.
12 ವರ್ಷಗಳಲ್ಲಿ ಮೊದಲ ಬಾರಿಗೆ ದೇಶವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದರಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತವನ್ನು ಒಳಗೊಂಡ ವಿಶ್ವಕಪ್ ಆರಂಭವಾಗಲಿದೆ. ಬೆಂಗಳೂರು, ಗುವಾಹಟಿ, ಇಂದೋರ್ ಮತ್ತು ವಿಶಾಖಪಟ್ಟಣಂನಲ್ಲಿ ಪಂದ್ಯಗಳು ನಡೆಯಲಿವೆ.
ಅಭ್ಯಾಸ ಪಂದ್ಯಗಳ ವೇಳಾಪಟ್ಟಿ
ಸೆ.25; ಭಾರತ vs ಇಂಗ್ಲೆಂಡ್
ಸೆ.25; ದಕ್ಷಿಣ ಆಫ್ರಿಕಾ vs ನ್ಯೂಜಿಲ್ಯಾಂಡ್
ಸೆ.25; ಶ್ರೀಲಂಕಾ vs ಪಾಕಿಸ್ತಾನ
ಸೆ.25; ಬಾಂಗ್ಲಾದೇಶ vs ಶ್ರೀಲಂಕಾ ʼಎʼ
ಸೆ.27; ಆಸ್ಟ್ರೇಲಿಯಾ vs ಇಂಗ್ಲೆಂಡ್
ಸೆ.27; ಭಾರತ vs ನ್ಯೂಜಿಲ್ಯಾಂಡ್
ಸೆ.27; ಶ್ರೀಲಂಕಾ vs ಬಾಂಗ್ಲಾದೇಶ
ಸೆ.28; ದಕ್ಷಿಣ ಆಫ್ರಿಕಾ vs ಭಾರತ 'ಎ'
ಸೆ.28; ಪಾಕಿಸ್ತಾನ vs ಶ್ರೀಲಂಕಾ 'ಎ'