ಢಾಕಾ: 2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ. ಭಾನುವಾರ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.
ಪಾಕಿಸ್ತಾನದ ವಿರುದ್ಧ ಭಾರತದ ಬಹು ನಿರೀಕ್ಷಿತ ಪಂದ್ಯ ಅಕ್ಟೋಬರ್ 6 ರಂದು ಸಿಲ್ಹೆಟ್‌ನಲ್ಲಿ ನಡೆಯಲಿದೆ. ಎ ಗುಂಪಿನಲ್ಲಿ ಆರು ಬಾರಿಯ ಚಾಂಪಿ ಯನ್ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಕ್ವಾಲಿಫೈಯರ್ 1 ತಂಡಗಳು ಒಳಗೊಂಡಿದ್ದು, ಈ ಪಂದ್ಯಗಳು ಸಿಲ್ಹೆಟ್‌ನಲ್ಲಿ ನಡೆಯಲಿವೆ.
ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಅಕ್ಟೋಬರ್ 4ರಂದು ಸಿಲ್ಹೆಟ್‌ನಲ್ಲಿ ಕ್ವಾಲಿಫೈಯರ್ 1ರ ವಿರುದ್ಧ ತಮ್ಮ ಅಭಿಯಾನ ಆರಂಭಿಸಲಿದೆ.
ಬಿ ಗುಂಪಿನಲ್ಲಿ ಆತಿಥೇಯ ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಕ್ವಾಲಿಫೈಯರ್ 2 ತಂಡಗಳು ಢಾಕಾದಲ್ಲಿ ಸೆಣಸಾಡ ಲಿವೆ. ಗ್ರೂಪ್ ಎ ಮತ್ತು ಗ್ರೂಪ್ ಬಿ ನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಅಕ್ಟೋಬರ್ 17ರಂದು ಸಿಲ್ಹೆಟ್‌ನಲ್ಲಿ ಮತ್ತು ಅಕ್ಟೋಬರ್ 18ರಂದು ಢಾಕಾದಲ್ಲಿ ಸೆಮಿಫೈನಲ್ ಪಂದ್ಯಗಳು ನಿಗದಿಪಡಿಸಲಾಗಿದೆ. ಅಕ್ಟೋಬರ್ 20ರಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ 2024ರ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ ಪೈಪೋಟಿ ನಡೆಯಲಿದೆ.
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅರ್ಹತಾ ಸುತ್ತಿನಿಂದ ಕ್ವಾಲಿಫೈಯರ್ 1 ಮತ್ತು ಕ್ವಾಲಿಫೈಯರ್ 2 ತಂಡಗಳು ಹೊರಹೊಮ್ಮಲಿವೆ. ಮೇ 7ರಂದು ಫೈನಲ್ ಪಂದ್ಯ ನಡೆಯಲಿದೆ.2014 ರ ನಂತರ ಎರಡನೇ ಬಾರಿಗೆ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಹತ್ತು ತಂಡಗಳು 18 ದಿನಗಳಲ್ಲಿ 23 ಪಂದ್ಯಗಳನ್ನು ಆಡಲಿವೆ.