ಇಂದಿನಿಂದ 4ನೇ ಆವೃತ್ತಿ ಮಹಿಳಾ ಪ್ರೀಮಿಯರ್ ಲೀಗ್ ಆರಂಭ; ಟೂರ್ನಿಯ ಮಾದರಿ ಹೇಗಿದೆ?
WPL 2026: 28 ದಿನಗಳ ಪಂದ್ಯಾವಳಿಯು ಈ ಸಲವೂ ಕೇವಲ ಎರಡು ನಗರಗಳಲ್ಲಿ ನಡೆಯಲಿದೆ. ನವಿ ಮುಂಬೈನ ಡಿ.ವೈ.ಪಾಟೀಲ್, ವಡೋದರಾದ ಕೋಟಂಬಿ ಕ್ರೀಡಾಂಗಣಗಳು ತಲಾ 11 ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಮೊದಲ ಚರಣ ನವಿ ಮುಂಬೈನಲ್ಲಿ ನಡೆಯಲಿದ್ದು, ಲೀಗ್ ಹಂತದ 9, ಪ್ಲೇ-ಆಫ್ ಹಾಗೂ ಫೈನಲ್ ಪಂದ್ಯ ವಡೋದರಾದಲ್ಲಿ ನಡೆಯಲಿವೆ. ಫೆಬ್ರವರಿ 3 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.
WPL 2026 -
ನವಿ ಮುಂಬಯಿ, ಜ.9: ಮಹಿಳಾ ಪ್ರೀಮಿಯರ್ ಲೀಗ್‌ನ (WPL 2026) 4ನೇ ಆವೃತ್ತಿಯು ಇಂದಿನಿಂದ(ಜ.9) ಆರಂಭಗೊಳ್ಳಲಿದೆ. ಫೆ.5ರ ವರೆಗೆ ನವಿ ಮುಂಬೈ ಮತ್ತು ವಡೋದರಾದಲ್ಲಿ ಪಂದ್ಯಾವಳಿ ನಡೆಯಲಿದೆ. ಇಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ ಆರ್‌ಸಿಬಿ ಸೆಣಸಾಟ ನಡೆಸಲಿದೆ. ಒಟ್ಟು 5 ತಂಡಗಳು ಈ ಟೂರ್ನಿಲ್ಲಿ ಪಾಲ್ಗೊಳ್ಳುತ್ತಿದ್ದು ಈ ಬಾರಿ ನೂತನ ತಂಡ ಚಾಂಪಿಯನ್ ಆಗಲಿದೆಯಾ ಎಂದು ಕಾದು ನೋಡಬೇಕಿದೆ.
ಟೂರ್ನಿ ಮಾದರಿ ಹೇಗೆ?
ಈ ಹಿಂದಿನ ಆವೃತ್ತಿಗಳಂತೆಯೇ ಈ ಸಲವೂ ಪ್ರಶಸ್ತಿಗಾಗಿ 5 ತಂಡಗಳು ಸೆಣಸಲಿವೆ. ಡಬಲ್ ರೌಂಡ್ ರಾಬಿನ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಅಂದರೆ ಪ್ರತಿ ತಂಡ ಉಳಿದ 4 ತಂಡದ ವಿರುದ್ಧ ತಲಾ 2 ಬಾರಿ ಆಡಲಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದ್ದು, 2 ಹಾಗೂ 3ನೇ ಸ್ಥಾನ ಪಡೆಯುವ ತಂಡಗಳು ಪ್ಲೇ-ಆಫ್‌ನಲ್ಲಿ ಮುಖಾಮುಖಿಯಾಗಲಿವೆ. ಆ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್‌ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಳ್ಳಲಿದೆ. ಫೆ.5ರಂದು ಫೈನಲ್ ನಿಗದಿಯಾಗಿದೆ.
ಜೂನ್- ಜುಲೈನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸಲು ನೆರವಾಗಲಿದೆ. ಭಾರತದ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಲು ಡಬ್ಲ್ಯುಪಿಎಲ್ ಅನ್ನು ಬಿಸಿಸಿಐ ಬಳಸಿಕೊಳ್ಳಲಿದೆ.
WPL 2026: ಟೂರ್ನಿಯ ಆರಂಭಕ್ಕೆ ಕ್ಷಣಗಣನೆ, ಮುಂಬೈ ಇಂಡಿಯನ್ಸ್‌ಗೆ ರಾಯಲ್ ಚಾಲೆಂಜರ್ಸ್ ಸವಾಲು!
ತಲಾ 11 ಪಂದ್ಯ
28 ದಿನಗಳ ಪಂದ್ಯಾವಳಿಯು ಈ ಸಲವೂ ಕೇವಲ ಎರಡು ನಗರಗಳಲ್ಲಿ ನಡೆಯಲಿದೆ. ನವಿ ಮುಂಬೈನ ಡಿ.ವೈ.ಪಾಟೀಲ್, ವಡೋದರಾದ ಕೋಟಂಬಿ ಕ್ರೀಡಾಂಗಣಗಳು ತಲಾ 11 ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ಮೊದಲ ಚರಣ ನವಿ ಮುಂಬೈನಲ್ಲಿ ನಡೆಯಲಿದ್ದು, ಲೀಗ್ ಹಂತದ 9, ಪ್ಲೇ-ಆಫ್ ಹಾಗೂ ಫೈನಲ್ ಪಂದ್ಯ ವಡೋದರಾದಲ್ಲಿ ನಡೆಯಲಿವೆ. ಫೆಬ್ರವರಿ 3 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳಾಪಟ್ಟಿ
ಜ.9: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
ಜ. 9: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್
ಜ.16: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್
ಜ.17: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್
ಜ.19: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್
ಜ.24: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್
ಜ.26: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್
ಜ.29: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್