ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎರಡು ತಂಡಗಳು ತಮ್ಮ ಅತ್ಯುತ್ತಮ ಸಾಮರ್ಥ್ಯ ವನ್ನು ಪ್ರದರ್ಶಿಸಲು ಸಜ್ಜಾಗಿದೆ.
ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಕಳೆದ ಮಾರ್ಚ್ ಏಪ್ರಿಲ್ ತಿಂಗಳಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅಮೋಘ ಜಯಭೇರಿ ಬಾರಿಸಿ ಈ ಫೈನಲ್ಗೆ ಅರ್ಹತೆ ಗಿಟ್ಟಿಸಿಕೊಂಡಿತು. ಇಂಗ್ಲೆಂಡ್ನಲ್ಲಿ ಈ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯ ನಡೆಯುತ್ತಿರುವ ಕಾರಣ ಇಲ್ಲಿನ ವಾತಾವರಣ ಹಾಗೂ ಪಿಚ್ ಆಸ್ಟ್ರೇಲಿಯಾ ತಂಡಕ್ಕೆ ಹೆಚ್ಚು ಅನುಕೂಲಕರ ಎಂಬ ಅಭಿಪ್ರಾಯಗಳು ಕೂಡ ಇದೆ.
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯ ಇಂಗ್ಲೆಂಡ್ನ ಲಂಡನ್ನಲ್ಲಿರುವ ಓವಲ್ ಮೈದಾನ ದಲ್ಲಿ ಬುಧವಾರದಿಂದ ಆರಂಭ ವಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು 2:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಆಸ್ಟ್ರೇಲಿಯಾ ಸಂಭಾವ್ಯ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್, ಟ್ರೆವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಬೋಲ್ಯಾಂಡ್, ನಥನ್ ಲಿಯಾನ್
ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಆರ್ ಎ ಜಡೇಜಾ, ಆರ್ ಅಶ್ವಿನ್, ಇಶಾನ್ ಕಿಶನ್(ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ