Saturday, 23rd November 2024

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ಸ್: ಟೀಮ್ ಇಂಡಿಯಾಕ್ಕೆ ಅಗ್ರಸ್ಥಾನ

ವದೆಹಲಿ: ವೆಲ್ಲಿಂಗ್ಟನ್ ನಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ನಂತರ, ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿ ಫೈನಲ್ ಗೆ ನಾಲ್ಕು ದಿನಗಳ ಮೊದಲು ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಭಾನುವಾರ ಬೆಳಿಗ್ಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನಕ್ಕೆ ಏರಿತು.

ಶೇ.64.58 ಅಂಕಗಳೊಂದಿಗೆ ಭಾರತವು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ 60.00 ಪಾಯಿಂಟ್ ಶೇಕಡಾವಾರು ಹೊಂದಿದೆ.

ವೆಲ್ಲಿಂಗ್ಟನ್ ಟೆಸ್ಟ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಭಾನುವಾರ ನವೀಕರಿಸಿದ ನಂತರ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಪಾಯಿಂಟ್ಸ್ ಟೇಬಲಿನಲ್ಲಿ ಅಗ್ರಸ್ಥಾನಕ್ಕೆ ಏರಿದೆ.

ಆಸ್ಟ್ರೇಲಿಯಾ ಈಗ ಮೂರನೇ ಸ್ಥಾನದಲ್ಲಿದೆ ಮತ್ತು ಅವರ ಅಂಕಗಳ ಶೇ.59.09 ರಷ್ಟಿದೆ. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 3-1 ಅಂತರದ ಮುನ್ನಡೆ ಸಾಧಿಸಿರುವ ಭಾರತ, ಮಾ.7 ರಿಂದ ಧರ್ಮಶಾಲಾದಲ್ಲಿ ಪ್ರಾರಂಭವಾಗುವ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ ಡಬ್ಲ್ಯುಟಿಸಿ ಟೇಬಲಿನಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಬಹುದು.

ಭಾರತ ಆಡಿದ ಎಂಟು ಟೆಸ್ಟ್ ಗಳಲ್ಲಿ, ರೋಹಿತ್ ಶರ್ಮಾ ಮತ್ತು ತಂಡವು ಐದು ಗೆಲುವು, ಎರಡು ಸೋಲು ಮತ್ತು ಒಂದು ಡ್ರಾವನ್ನು ದಾಖಲಿಸಿದೆ.

ಗೆಲುವಿಗಾಗಿ 12 ಅಂಕಗಳನ್ನು, ಟೈಗೆ 6 ಅಂಕಗಳನ್ನು ಮತ್ತು ಡ್ರಾಗೆ 4 ಅಂಕಗಳನ್ನು ನೀಡಲಾಗುತ್ತದೆ.