Yash Dayal: ಆರ್‌ಸಿಬಿ ವೇಗಿ ಯಶ್ ದಯಾಳ್ ಮೇಲೆ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ
ಅಪ್ರಾಪ್ತ ವಯಸ್ಕಳಾಗಿದ್ದಾಗಿನಿಂದ ಈ ರೀತಿಯ ದೌರ್ಜನ್ಯಗಳು ಎರಡು ವರ್ಷಗಳ ಕಾಲ ಮುಂದುವರಿದಿದ್ದು, ಇದರಿಂದಾಗಿ ಪೊಲೀಸರು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ಲೈಂಗಿಕ ಅಪರಾಧಗಳ ವಿರುದ್ಧ ಕಠಿಣ ಕಾನೂನು ಆಗಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.


ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವೇಗಿ ಯಶ್ ದಯಾಳ್(Yash Dayal)ಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗಷ್ಟೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ, ಬಂಧನದಿಂದ ಪಾರಾಗಿದ್ದ ಅವರ ಮೇಲೆ ಮತ್ತೊಂದು ಅತ್ಯಾಚಾರ ಆರೋಪದ ಕೇಸ್ ದಾಖಲಾಗಿದೆ. ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯೊಬ್ಬರು ಕ್ರಿಕೆಟಿಗ ಎರಡು ವರ್ಷಗಳ ಅವಧಿಯಲ್ಲಿ ತನ್ನ ಮೇಲೆ ಪದೇಪದೇ ಅತ್ಯಾಚಾರ ಎಸಗಿದ್ದಾರೆ ಮತ್ತು ಭಾವನಾತ್ಮಕವಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರಿನ ಪ್ರಕಾರ, ಸಂತ್ರಸ್ತೆ ದಯಾಳ್ ಅವರು ಜೈಪುರದಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ 17 ವರ್ಷದವಳಿದ್ದಾಗ ಮೊದಲು ಸಂಪರ್ಕಕ್ಕೆ ಬಂದರು. ದಯಾಳ್ ಅವರು ವೃತ್ತಿ ಸಲಹೆ ನೀಡುವ ನೆಪದಲ್ಲಿ ಸೀತಾಪುರದ ಹೋಟೆಲ್‌ಗೆ ಅವರನ್ನು ಆಹ್ವಾನಿಸಿದ್ದರು, ಅಲ್ಲಿ ಮೊದಲ ಲೈಂಗಿಕ ದೌರ್ಜನ್ಯ ನಡೆದಿತ್ತು. ತಾನು ಅಪ್ರಾಪ್ತ ವಯಸ್ಕಳಾಗಿದ್ದಾಗಿನಿಂದ ಈ ರೀತಿಯ ದೌರ್ಜನ್ಯಗಳು ಎರಡು ವರ್ಷಗಳ ಕಾಲ ಮುಂದುವರಿದಿದ್ದು, ಇದರಿಂದಾಗಿ ಪೊಲೀಸರು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ಲೈಂಗಿಕ ಅಪರಾಧಗಳ ವಿರುದ್ಧ ಕಠಿಣ ಕಾನೂನು ಆಗಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.
ಈ ಪ್ರಕರಣಕ್ಕೂ ಮುನ್ನ ಉತ್ತರಪ್ರದೇಶದ ಗಾಜಿಯಾಬಾದ್‌ನ ಮಹಿಳೆಯೊಬ್ಬರು ಮದುವೆಯಾಗುವುದಾಗಿ ನಂಬಿಸಿ 5 ವರ್ಷಗಳಿಂದ ನನ್ನ ಮೇಲೆ ದಯಾಳ್ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಕೇಸ್ ದಾಖಲಿಸಿದ್ದರು. ಈ ಕೇಸ್‌ನಲ್ಲಿ ಬಂಧನಕ್ಕೆ ತಡೆ ನೀಡುವಂತೆ ದಯಾಳ್, ಅಲಹಾಬಾದ್ ಹೈಕೋರ್ಟ್‌ನ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಂದಿನ ವಿಚಾರಣೆ ನಡೆಸುವವರೆಗೂ ದಯಾಳ್ ಅವರನ್ನು ಬಂಧಿಸದಿರುವಂತೆ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಇದೀಗ ದಯಾಳ್ ವಿರುದ್ ಮತ್ತೊಂತು ಅತ್ಯಾಚಾರ ಪ್ರಕರಣ ಕೇಳಿ ಬಂದಿದೆ.
ಇದನ್ನೂ ಓದಿ ಲೈಂಗಿಕ ದೌರ್ಜನ್ಯ: ಕ್ರಿಕೆಟಿಗ ಯಶ್ ದಯಾಳ್ ಬಂಧನಕ್ಕೆ ಹೈಕೋರ್ಟ್ ತಡೆ