ನಿರ್ದೇಶಕ ಎಸ್.ಎಸ್.ರಾಜಮೌಳಿಗೆ ಹುಟ್ಟುಹಬ್ಬದ ಸಂಭ್ರಮ
ನಿರ್ದೇಶಕ ಎಸ್.ಎಸ್.ರಾಜಮೌಳಿಗೆ ಹುಟ್ಟುಹಬ್ಬದ ಸಂಭ್ರಮ
-
Vishwavani News
Oct 10, 2020 12:48 PM
ಹೈದರಾಬಾದ್: ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.
47ನೇ ವಸಂತಕ್ಕೆ ಕಾಲಿಟ್ಟಿರುವ ರಾಜಮೌಳಿ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. ರಾಜಮೌಳಿ ಕೇವಲ ನಿರ್ದೇಶಕ ಮಾತ್ರವಲ್ಲ. ಅವರು ಉತ್ತಮ ಚಿತ್ರಕಥೆಗಾರ, ಸ್ಟಂಟ್ ನಿರ್ದೇಶಕ ಸಹ ಹೌದು. ಆಕ್ಷನ್ ಪ್ಯಾಕ್ ಸಿನಿಮಾಗಳಿಗೆ ರಾಜಮೌಳಿ ಹೆಸರುವಾಸಿ.
ಬಾಹುಬಲಿ ಸಿನಿಮಾ ಮೂಲಕ ರಾಜಮೌಳಿ ಭಾರತೀಯ ಸಿನಿಮಾರಂಗದಲ್ಲಿ ಸಂಚಲನ ಸೃಷ್ಟಿ ಮಾಡಿದ್ದಾರೆ. ದೇಶ ಮಾತ್ರ ವಲ್ಲದೆ ವಿದೇಶದಲ್ಲೂ ಬಾಹುಬಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡಿದೆ. ಸ್ಟೂಡೆಂಟ್ ನಂ.1 ಸಿನಿಮಾ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ರಾಜಮೌಳಿ 10ಕ್ಕು ಹೆಚ್ಚು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ರಾಜಮೌಳಿ ನಿರ್ದೇಶನದ ಸಿನಿಮಾಗಳಲ್ಲಿ ಸೈ, ಮಗಧೀರ, ಮರ್ಯಾದ ರಾಮಣ್ಣ, ಚತ್ರಪತಿ, ವಿಕ್ರಮಾರ್ಕುಡು, ಈಗ ಮತ್ತು ಬಾಹುಬಲಿ ಸಿನಿಮಾಗಳು ತೆಲುಗು ಸಿನಿಮಾರಂಗದಲ್ಲಿ ದೊಡ್ಡ ಮಟ್ಟಕ್ಕೆ ಸಕ್ಸಸ್ ಕಂಡಿವೆ. ರೌಜಮೌಳಿ ಸದ್ಯ ಆರ್ ಆರ್ ಆರ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಇಬ್ಬರು ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಲಾಕ್ ಡೌನ್ ಬಳಿಕ ಮತ್ತೆ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ತೆರೆಗೆ ಬರುತ್ತಿದೆ.