SSLC Result: ಎಸ್.ಎಸ್.ಎಲ್.ಸಿ ಫಲಿತಾಂಶ ಗುಣಾತ್ಮಕವಾಗಿರಲಿ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಕರೆ

2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ” ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಸಮೃದ್ಧಿ ಪುಸ್ತಕ ಹಸ್ತಾಂತರ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

SLC
Profile Ashok Nayak January 16, 2025

Source : Chikkaballapur Reporter

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ 2024-25 ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶವು ವಿದ್ಯಾರ್ಥಿಗಳ ಉತ್ತೀರ್ಣಕ್ಕೆ ಮಾತ್ರ ಸೀಮಿತವಾಗಿರದೆ ಗುಣಾತ್ಮಕ ಫಲಿ ತಾಂಶವಾಗಿ ಹೊರಹೊಮ್ಮಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಮುಖ್ಯಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಕರೆ ನೀಡಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ, ಎ.ಸಿ.ಸಿ ಸಿಮೆಂಟ್  ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, “2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ” ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಸಮೃದ್ಧಿ ಪುಸ್ತಕ ಹಸ್ತಾಂತರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2024-25 ನೇ ಸಾಲಿನ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯ ಜಿಲ್ಲಾ  ಮಟ್ಟದ ಮೂರನೇ ಹಂತದ ಪ್ರಗತಿ ಪರಿಶೀಲನಾ ಸಭೆಯನ್ನು ಈಗಾಗಲೇ ನಡೆಸಲಾಗಿದೆ. ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಯಾವ ರೀತಿ ಉತ್ತಮ ಪಡಿಸಬೇಕು ಎನ್ನುವ ಹಿನ್ನೆಲೆಯಲ್ಲಿ ಈ ಸಭೆಗಳು ಸಹಾಯಕವಾಗಿವೆ. ಒಂದು ಶಾಲೆಯ ಫಲಿಂತಾAಶಕ್ಕೆ ಹಿನ್ನಡೆಯಾದರೆ ಅದರಲ್ಲಿ ಜಿಲ್ಲಾ ಡಳಿತವು ಹೊಣೆಗಾರಿಕೆಯನ್ನು ಹೊರಬೇಕಾಗಿರುತ್ತದೆ ಎಂದರು.

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಯನ್ನು ಮುಂದಿರುವ ವಿದ್ಯಾರ್ಥಿಯೊಡನೆ ಸಂಯೋ ಜನೆ ಮಾಡಬೇಕು .ಕಲಿಕೆಯಲ್ಲಿ ಮುಂದಿರುವ ವಿದ್ಯಾರ್ಥಿಗಳನ್ನು ಇನ್ನಷ್ಟು ಪ್ರೋತ್ಸಾಹಿಸಿ ಗುಣಮಟ್ಟವನ್ನು ಹೆಚ್ಚಿಸಬೇಕು. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಮಾನಸಿಕ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಅವರಿಗೆ ಅರ್ಥೈಸುವ ರೀತಿಯಲ್ಲಿ ಸರಳ ವಿಧಾನದಲ್ಲಿ ತಿಳಿಸಿಕೊಟ್ಟು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮುಖ್ಯವಾಗಿ ಅವರ ಬರವ ಣಿಗೆ ಶೈಲಿಯನ್ನು ಗಮನಿಸಿ ತಿದ್ದಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ನಿಗಾವಹಿಸುವಂತೆ ತಾಕೀತು ಮಾಡಿದರು.

ಪ್ರತಿ 15 ದಿನಗಳಿಗೊಮ್ಮೆ ಪೋಷಕರ ಸಭೆಯನ್ನು ನಡೆಸಿ ಮಕ್ಕಳ ಕಲಿಕಾ ಪ್ರಗತಿಯನ್ನು ಪೋಷಕರಿಗೆ ತಿಳಿಸಬೇಕು. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿಶೇಷ ತರಗತಿಗಳನ್ನು ಹಮ್ಮಿ ಕೊಳ್ಳಬೇಕು. ತಾಲೂಕು ಮಟ್ಟದ ಅಧಿಕಾರಿಗಳಿಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಜವಾಬ್ದಾರಿ ನೀಡಲಾಗಿದೆ. ಹತ್ತನೇ  ತರಗತಿ ಫಲಿತಾಂಶ ವೃದ್ಧಿಗಾಗಿ ಶಿಕ್ಷಕರು ಕೈಗೊಂಡಿ ರುವ ಕ್ರಮಗಳ ಬಗ್ಗೆ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಪ್ರತಿ ತಿಂಗಳು ತಾಲ್ಲೂಕು ಮಟ್ಟದಲ್ಲಿ ಮುಖ್ಯ ಶಿಕ್ಷಕರ ಸಭೆ ಕರೆದು ಹತ್ತನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚೆ ನಡೆಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಲವು ಕಲಿಕಾ ಕಾರ್ಯಕ್ರಮಗಳನ್ನು ರೂಪಿಸಿ ಮಕ್ಕಳನ್ನು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಎ.ಸಿ.ಸಿ ಸೀಮೆಂಟ್ ಕಂಪನಿ ಸಹಯೋಗದಲ್ಲಿ ಶಿಕ್ಷಣ ಇಲಾಖೆಯು ಜಿಲ್ಲೆಯ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಂಜೀವಿನಿ ಅಭ್ಯಾಸ ಪುಸ್ತಕಗಳನ್ನು ವಿತರಿಸುತ್ತಿದ್ದು, ಕಲಿಕೆ ಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಈ ಪುಸ್ತಕಗಳು ಹೆಚ್ಚಿನ ಮಟ್ಟದಲ್ಲಿ ಸಹಾಯಕ ವಾಗಲಿದ್ದು ಶಿಕ್ಷಕರು  ತಪ್ಪದೆ ಅಭ್ಯಾಸ ಮಾಡಿಸಬೇಕು. ವಿದ್ಯಾರ್ಥಿಗಳು ಮನೆಯಲ್ಲಿ ಪ್ರತಿದಿನ ಕನಿಷ್ಠ ಮೂರು ಗಂಟೆ ಕಾಲ ಅಭ್ಯಾಸ  ಮಾಡುವುದನ್ನು ಖಾತ್ರಿಪಡಸಿ ಕೊಳ್ಳುವುದು ಶಿಕ್ಷಕರ ಜವಾಬ್ದಾರಿ.ಮೇಲಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗ ಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬಲು ಪ್ರೇರಣಾ ತರಗತಿಗಳನ್ನು ಕೂಡ ಆಯೋಜಿಸ ಬೇಕು ಎಂದರು.

ಜಿಲ್ಲೆಯ ಶಾಸಕರು ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಈಗಗಾಲೇ ಚಿಕ್ಕಬಳ್ಳಾಪುರ ಶಾಸಕರು ನಡೆಸುತ್ತಿರುವ ಸರಣಿ ಘಟಕ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಇದೇ ಮಾದರಿಯಲ್ಲಿ ಇತರ ಶಾಸಕರು ನಡೆಸಲು ಸಹಕಾರ ನೀಡುತ್ತಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶದ ವೃದ್ಧಿಗೆ ಎಲ್ಲಾ ತಾಲ್ಲೂಕಿನ  ಶಾಸಕರ ಸಹಕಾರವು ಉತ್ತಮವಾಗಿದೆ ಎಂದು ತಿಳಿಸಿದರು.

ಬಿ.ಇ.ಒ ಹಾಗೂ ನೋಡಲ್ ಅಧಿಕಾರಿಗಳು ಆಯಾ ತಾಲ್ಲೂಕುಗಳ ಶಾಲೆಗಳಿಗೆ ಭೇಟಿ ನೀಡಿ  ಶಾಲೆಗಳ ಸ್ಥಿತಿಗತಿಗಳ ಕುರಿತು ವರದಿ ನೀಡಬೇಕು  ಮುಂದಿನ ಎರಡು ತಿಂಗಳ ಕಾಲಾವಧಿ ಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ವೃದ್ಧಿಸಿ ಕಳೆದ ಬಾರಿಗಿಂತ ಉತ್ತಮ ಸ್ಥಾನ ವನ್ನು ಜಿಲ್ಲೆ ಗಳಿಸುವಂತಾಗಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಸಹಕಾರ ನೀಡುವಂತೆ  ಜಿಲ್ಲಾಧಿಕಾರಿ ಮನವಿ ಮಾಡಿದರು.

ಇದೇ ವೇಳೆ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ 5000 ಸಾವಿರ ವಿದ್ಯಾರ್ಥಿಗಳಿಗೆ 30000 ಕಲಿಕಾ  ಸಂಜೀವಿನಿ ಪುಸ್ತಕಗಳನ್ನು ವಿತರಿಸಿದ ಎಸಿಸಿ ಸಿಮೆಂಟ್ ಕಂಪನಿ ವ್ಯವಸ್ಥಾಪಕ ಪ್ರಶಾಂತ್ ದೇಶ್ ಮುಖ್ ಅವರನ್ನು ಜಿಲ್ಲಾಧಿಕಾರಿಗಳು ಸನ್ಮಾನಿಸಿ ದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮುನಿಕೆಂಪೇಗೌಡ, ಕ್ಷೇತ್ರ ಶಿಕ್ಷಣಾಧಿ ಕಾರಿ ಹಾಗೂ ನೋಡಲ್ ಅಧಿಕಾರಿ ಡಿ.ಎನ್ ಸುಕನ್ಯಾ, ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ, ಬಾಗೇಪಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಗೌರಿಬಿದನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಮೂರ್ತಿ, ಗುಡಿಬಂಡೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಶಿಡ್ಲ ಘಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಂಅಅ ಸಿಮೇಂಟ್ ವ್ಯವಸ್ಥಾಪಕ ಪ್ರಶಾಂತ್ ದೇಶ್ ಮುಖ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ನೋಡಲ್ ಅಧಿಕಾರಿಗಳು, ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮುಖ್ಯೋಪಾಧ್ಯಯರು ಉಪಸ್ಥಿತರಿದ್ದರು.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ