Tuesday, 27th July 2021

ಕೋವಿಡ್ ನಿಯಂತ್ರಣಕ್ಕೆ ಬರದಿದ್ದರೆ ಎಸ್‌ಎಸ್ಎಲ್ಸಿ ಪರೀಕ್ಷೆ ರದ್ದು: ಬಿಎಸ್‌’ವೈ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾದರೆ ಮಾತ್ರ ಎಸ್‌ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿ, ಯಾವುದೇ ಕಾರಣಕ್ಕೂ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ. ಕೋವಿಡ್ ನಿಯಂತ್ರಣಕ್ಕೆ ಬರದಿದ್ದರೆ ಪರೀಕ್ಷೆ ರದ್ದುಪಡಿಸಲಾಗುವದು ಎಂದರು.

ಬೆಳಗಾವಿಯ ಭೀಮ್ಸ್ ಆಸ್ಪತ್ರೆಯ ಕುರಿತು ಪ್ರಸ್ತಾಪಿಸಿದ ಅವರು ಶೀಘ್ರದಲ್ಲೇ ಬಿಮ್ಸ್‌ಗೆ ಸಮರ್ಥ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡುವುದಾಗಿ ಪ್ರಕಟಿಸಿದರು.

ಅವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಕಬ್ಬು ಬೆಳೆಗಾರರಿಗೆ ಬರಬೇಕಿರುವ ಬಾಕಿ ಹಣ ಕೊಡಿಸಲು ಕ್ರಮಕೈಗೊಳ್ಳುವು ದಾಗಿ ಹೇಳಿದರು.

Leave a Reply

Your email address will not be published. Required fields are marked *