Monday, 8th March 2021

ಮಾರ್ಚ್‌ನಲ್ಲಿ ಬಜೆಟ್ ಮಂಡನೆ: ಮುಖ್ಯಮಂತ್ರಿ ಯಡಿಯೂರಪ್ಪ

ಕುಂದಾಪುರ: ಮಾರ್ಚ್‌ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿ, ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಪ್ರವಾಸದಲ್ಲಿ ಸಕಾಲಕ್ಕೆ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧಿಯಾಗಲಿ’ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರೇಣುಕಾಚಾರ್ಯ ಸಹಜವಾಗಿ ನೋವನ್ನು ವ್ಯಕ್ತಪಡಿಸಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶವಿದೆ. ಎಲ್ಲವನ್ನು ಸರಿದೂಗಿಸಿಕೊಂಡು ಹೋಗುವ ವಿಶ್ವಾಸವಿದೆ ಎಂದರು.

Leave a Reply

Your email address will not be published. Required fields are marked *