Friday, 19th August 2022

ಹೆದ್ದಾರಿ ಕುಸಿದು ಮಡಿಕೇರಿ-ಮಂಗಳೂರು ಸಂಪರ್ಕ ಕಡಿತ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದ್ದು, ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ.

ಜಿಲ್ಲೆಯಲ್ಲಿ ಭಾರೀಯ ಮಳೆಗೆ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮ ದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದೆ. ಸೇತುವೆಯ ಕೆಳಭಾಗದಲ್ಲಿ‌ ಪ್ರವಾಹದಿಂದ‌ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದ್ದು, ಸೇತುವೆ ಕುಸಿದು ಬೀಳುವ ಸಾಧ್ಯತೆ ಇದ್ದು, ಮಡಿಕೇರಿ-ಮಂಗ ಳೂರು ಸಂಪರ್ಕ ಕಡಿತಗೊಂಡಿದೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಸಹ ಮಳೆಯಾಗು ತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.