Tuesday, 7th December 2021

ನ.23 ರವರೆಗೂ ರಾಜ್ಯದಲ್ಲಿ ಮಳೆಯ ಆರ್ಭಟ

Rain in Bangalore

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನ.23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವ ಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆ ಗಳಲ್ಲಿ ಭಾರೀ ಮಳೆಯಾ ಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನ.22 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ.

ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.