Tuesday, 12th November 2024

ಕಲ್ಯಾಣ ಕರ್ನಾಟಕದ ಕಡೆಗಣನೆ ಇಲ್ಲವೆ ಇಲ್ಲ: ಸಚ್ಚಿದಾನಂದ ಮೂರ್ತಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ರಾಜ್ಯದ ಬ್ರಾಹ್ಮಣ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಬ್ರಾಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಿದ್ದು, ಇದೀಗ ಪೂರ್ಣ ಪ್ರಮಾಣದ ಸದಸ್ಯ ಬಲದೊಂದಿಗೆ ಮಂಡಳಿ ಅಸ್ತಿತ್ವಕ್ಕೆ ಬಂದಿದೆ.  ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಜಾರಿ ಮಾಡಲು ಮುಂದಡಿ ಇರಿಸುತ್ತಿದೆ ಎಂದು ಮಂಡಳಿ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದಮೂರ್ತಿ ತಿಳಿಸಿದ್ದಾರೆ.

ಅಭಿವೃದ್ಧಿಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಮಂಡಳಿಗೆ ಸಂಬಂಧಿಸಿದಂತೆ ಹಲವು ಟೀಕೆಗಳು ಸರಿಯಲ್ಲ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯದ ಎಲ್ಲ ಪ್ರಾದೇಶಿಕ ವಿಭಾಗಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ. ಹೀಗಾಗಿ ಕಲ್ಯಾಣ ಕರ್ನಾಟಕ ಸೇರಿದಂತೆ ಯಾವುದೇ ಪ್ರದೇಶದ ಕಡೆಗಣನೆ ಮಾಡುವುದಿಲ್ಲ ಎಂದು ಸ್ಷಷ್ಟಪಡಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋವಿಡ್-19 ಗೂ ಮುನ್ನ ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡು
ಸಮುದಾಯದವರನ್ನು ಭೇಟಿ ಮಾಡಿದ್ದೇನೆ. ಕರೋನಾ ವೈರಸ್ ಸಂಕಷ್ಟದ ವೇಳೆ ಗುಲ್ಬರ್ಗಾ, ರಾಯಚೂರು, ಬೀದರ್, ಉಡುಪಿ, ಮಂಗಳೂರು, ದಾವಣಗೆರೆ, ತುಮಕೂರು, ಶಿವಮೊಗ್ಗ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ರಾಮನಗರ, ಚಾಮರಾಜನಗರ ಸೇರಿದಂತೆ ಇಡೀ ರಾಜ್ಯದಾದ್ಯಂತ 41 ಸಾವಿರದಷ್ಟು ಆಹಾರ ಪದಾರ್ಥ ಕಿಟ್ ವಿತರಿಸಿದ್ದೇವೆ. ಯಾವುದೇ ಜಿಲ್ಲೆಗಳಿಗೂ ತಾರತಮ್ಯ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಮಂಡಳಿಯು ಇದೀಗ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಕಲ್ಯಾಾಣ ಕರ್ನಾಟಕದ ಜಿಲ್ಲೆಗಳೂ ಸೇರಿದಂತೆ ಪ್ರದೇಶವಾರು ಸಮುದಾಯದ ಮುಖಂಡರನ್ನು ಭೇಟಿ ಮಾಡಿ ಯೋಜನೆಗಳನ್ನು ರೂಪಿಸುತ್ತೇನೆ. ಯಾವುದೇ ಪ್ರದೇಶದ ಕಡೆಗಣನೆ ಪ್ರಶ್ನೆಯೆ ಇಲ್ಲ ಎಂದು ತಿಳಿಸಿದ್ದಾಾರೆ.