Tuesday, 10th December 2024

ಮೊಬೈಲ್ ಫೀವರ್ ಕ್ಲಿನಿಕ್ ಗೆ ಚಾಲನೆ

ಮಾನ್ಯ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನಿರ್ಮಾಣ ಮಾಡಿರುವ *ಮೊಬೈಲ್ ಫೀವರ್ ಕ್ಲಿನಿಕ್ ಬಸ್ಸನ್ನು* ಬೆಳಗಾವಿಯಲ್ಲಿ ಇಂದು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಸುರೇಶ್ ಅಂಗಡಿಯವರು, ಸಚಿವರಾದ ಜಗದೀಶ್ ಶೆಟ್ಟರ್ ರವರು, ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ ಅವರು, ರಾಜ್ಯಸಭಾ ಸದಸ್ಯರಾದ ಪ್ರಭಾಕರ್ ಕೋರೆ ಅವರು, ವಿಧಾನಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಅವರು ಶಾಸಕರಾದ ಸತೀಶ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ ಅಭಯ ಪಾಟೀಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.