ವಿಶ್ವವಾಣಿ ಸುದ್ದಿಮನೆ ಬೆಂಗಳೂರು:
ಲಾಕ್ ಡೌನ್ ನಡುವೆಯೂ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದ ಆರ್.ಪಿ.ಸಿ ಲೇಔಟ್ ನ ಧನಂಜಯ(29),ಆರ್.ಟಿ ನಗರದ ಸಂಜಯ್(29) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ 1 ಲಕ್ಷ 25 ಸಾವಿರ ಮೌಲ್ಯದ ಕಿಂಗ್ ಫಿಶರ್, ವೊಡ್ಕಾ,ವಿಸ್ಕಿ,ಸೇರಿದಂತೆ 100 ಮದ್ಯದ ಬಾಟಲುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಆರೋಪಿಗಳು ಆರ್.ಟಿ ನಗರದ ಮಹಬಾನ್ ಸ್ಟ್ರೀಟ್ ನ ಮನೆಯೊಂದರಲ್ಲಿ ಮದ್ಯ ಬಾಟಲುಗಳು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಬಾಟಲಿಗೆ ನಾಲ್ಕರಿಂದ ಐದು ಸಾವಿರ ರು.ಗಳಿಗೆ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಆಧಾರಿಸಿ ಕಾರ್ಯಾಚರಣೆ ಕೈಗೊಂಡು ಸಿಸಿಬಿ ಪೋಲಿಸರು ಮನೆ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ದಾಳಿಯನ್ನು ತೀವ್ರಗೊಳಿಸಲಾಗುವುದು ಎಂದು ಸಂದೀಪ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.