ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:
ಅಗತ್ಯ ವಸ್ತುಗಳ ಸರಬರಾಜು ಉಸ್ತುವಾರಿಯನ್ನು ನೋಡಿಕೊಳ್ಳಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕರೋನಾ ಭೀತಿಯಿಂದ ದೇಶವ್ಯಾಪಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳು ತಲುಪುವಂತಾಗಬೇಕು. ದಿನಸಿ ಪದಾರ್ಥಗಳು, ಹಣ್ಣು, ತರಕಾರಿ, ಗ್ಯಾಸ್ ಹಾಗೂ ಮೆಡಿಸಿನ್ ಪೂರೈಕೆಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಹಾಗೆಯೇ ಬೆಂಗಳೂರು ಸೇರಿದಂತೆ ಇಡೀ ರಾಜ್ಯಕ್ಕೆ ಸಮರ್ಪಕವಾಗಿ ಅಗತ್ಯ ವಸ್ತುಗಳು ತಲುಪುವಂತೆ ಉಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿಯನ್ನು ಸರಕಾರ ಕೆ.ಎಸ್.ಆರ್.ಪಿ. ಎಡಿಜಿಪಿ ಅಲೋಕ್ ಕುಮಾರ್‌ಗೆ ನೀಡಿದೆ. ಇನ್ನು ಹೊರ ರಾಜ್ಯಗಳಿಂದ ಬರುವ ಅಗತ್ಯ ವಸ್ತುಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರಕಾರಕ್ಕೆ ವರದಿ ನೀಡುವಂತೆ ಅಲೋಕ್ ಕುಮಾರ್‌ಗೆ ಸರಕಾರದಿಂದ ಸೂಚನೆ ನೀಡಲಾಗಿದೆ.