Saturday, 14th December 2024

ಅಧಿಕ ಬಡ್ಡಿ ವಸೂಲಿ : ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಪತ್ರ

ವಿಶ್ವವಾಣಿ ಸುದ್ದಿಮನೆ

ಬೆಂಗಳೂರು :

ಕರೋನ ಸೋಂಕು ಹರಡುವ ಹಿನ್ನೆಲೆ ಮನೆಯಲ್ಲಿ ಉಳಿದಿರುವ ಜನರ ಬಳಿ ಬಡ್ಡಿ ವಸೂಲಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಲಾಕ್‌ಡೌನ್‌ನಿಂದ ಜನರಿಗೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಕೇಂದ್ರ ಸರಕಾರ ಎಲ್ಲ ಬ್ಯಾಾಂಕ್‌ಗಳ ಮೂರು ತಿಂಗಳ ಇಎಂಐ ಮುಂದೂಡುವಂತೆ ಆದೇಶ ಹೊರಡಿಸಿದೆ. ಆದರೆ, ಬಡ, ಮಧ್ಯಮ ವರ್ಗದವರಿಗೆ ಬಡ್ಡಿ ದಂಧೆಕೋರರು ಕಿರುಕುಳ ಕೊಟ್ಟು ಬಲವಂತವಾಗಿ ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾmರೆ.