ರಾಮನಗರ:
ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಹನುಮಂತು ಕೆ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ರಾಮನಗರದ ಜಿಲ್ಲಾ ಕಾರಾಗೃಹದ ಬಳಿ ವರದಿಗಾರಿಕೆಗೆ ತೆರಳಿದ್ದಾಗ ಹಿಂದಿನಿಂದ ಬಂದ ಎಟಿಎಂ ವಾಹನ ಅವರ ಬೈಕ್ ಗೆ ಡಿಕ್ಕಿ ಹೊಡೆದು ಮೃತರಾಗಿದ್ದಾರೆ.
ಪಬ್ಲಿಕ್ ಟಿ.ವಿ ವರದಿಗಾರರಾಗಿ ಹನುಮಂತು ಅವರು ಕಳೆದ 6 ವರ್ಷಗಳಿಂದಲೂ ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ವಿವಾಹವಾಗಿ ಮೂರು ವರ್ಷವಾಗಿತ್ತು. ಎರಡು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಕನಕಪುರ ತಾಲೂಕಿನ ಪಡವಣಗೆರೆಯಲ್ಲಿ ನೆರವೇರಿತು.
*ಸಂತಾಪ:*
ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ಥನಾರಾಯಣ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿರುವ ಅವರು ವೈಯಕ್ತಿಕವಾಗಿ 5 ಲಕ್ಷ ರೂ.ಗಳನ್ನು ಮೃತರ ಕುಟುಂಬಕ್ಕೆ ನೀಡುವುದಾಗಿ ತಿಳಿಸಿದ್ದಾರೆ.
ಮಾಜಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ 5 ಲಕ್ಷ ರು., ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ನಿಂದ 5 ಲಕ್ಷ ರು., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ 20 ಸಾವಿರ ರು. ಪರಿಹಾರ ಘೋಷಣೆ ಮಾಡಿದೆ.