Friday, 13th December 2024

ಎಚ್‍ಎಎಲ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ

ಬೆಂಗಳೂರು:

ಸುಮಾರು ಐದು ಗಂಟೆಗಳ ಸತತ ಕಾರ್ಯಾಚರಣೆ ನಡೆಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕಾರ್ಯಾಚರಣೆಯಲ್ಲಿ 8 ಅಗ್ನಶಾಮಕ ದಳದವರು ಪಾಲ್ಗೊಂಡಿದ್ದರು.

ಹಳೇ ಏರ್ಪೋರ್ಟ್ ರಸ್ತೆಯಲ್ಲಿರುವ ಎಚ್‍ಎಎಲ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.  ವಿಮಾನ ಹಾಗ ಇತರೆ ವಾಹನಗಳ ನಿರುಪಯುಕ್ತ ಬಿಡಿಭಾಗಗಳನ್ನು ಈ ಗೋದಾಮಿನಲ್ಲಿ (ಎಫ್ ಅಂಡ್ ಎಫ್ )ಇರಿಸಲಾಗಿತ್ತು. ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಮೂರು ಮಹಡಿಗಳಲ್ಲೂ ಹರಡಿ ಹೊತ್ತಿ ಉರಿದಿದೆ.

ಸದ್ಯ ಹೆಚ್ಚಿನ ಅನಾಹುತವಾಗಿಲ್ಲ ಎಂದು ಎಚ್‍ಎಎಲ್‍ನ ಮಾಧ್ಯಮ ಮುಖ್ಯ ಸಂಪರ್ಕ ಅಧಿಕಾರಿ ಗೋಪಾಲ್ ತಿಳಿಸಿದ್ದಾರೆ. ಘಟನೆ ಕುರಿತಂತೆ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಕ್ಕಪಕ್ಕದ ಪ್ರದೇಶಗಳ ವಾಹನ ಸಂಚಾರ ಮತ್ತು ಜನರ ಓಡಾಟವನ್ನು ನಿರ್ಬಂಧಿಸಲಾಗಿತ್ತು.