Sunday, 15th December 2024

ಎಚ್ ಡಿಕೆ ಜನತಾ ದಾಸೋಹ

ಬೆಂಗಳೂರು: ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ’ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.

ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್‌ಡೌನ್‌ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್‌ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.

ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.

ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.