ವಿಶ್ವವಾಣಿ ಸುದ್ದಿಮನೆ ಬೆಂಗಳೂರು:
ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದುವೆ ಸಮಾರಂಭಗಳಿಗೆ ತಡೆ ನೀಡಿದ್ದರೂ ಕೆಲ ಜೋಡಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಅದರ ಬೆನ್ನಲ್ಲೇ ಶುಕ್ರವಾರ ನವದಂಪತಿ ದಾಂಪತ್ಯಕ್ಕೆ ಕಾಲಿಟ್ಟು ನೇರವಾಗಿ ಗಿರಿನಗರ ಪೊಲೀಸ್ ಠಾಣೆಗೆ ಬಂದು ರಕ್ಷಣೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಗಿರಿನಗರದ ಮುರುಗನ್ ಮತ್ತು ಮೇಘಶ್ರೀ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರ ವಿವಾಹಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದು, ಇಬ್ಬರು ಮನೆಯಿಂದ ಓಡಿಬಂದು ದೇವಸ್ಥಾನದಲ್ಲಿ ಮದುವೆಯಾಗಿ ನಂತರ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಹಾಕಿಕೊಂಡು ದೂರನಿಂತುಕೊಂಡೆ ಪ್ರೇಮಿಗಳು ಪೊಷಕರ ವಿರೋಧದ ಹಿನ್ನೆಲೆಯಲ್ಲಿ ನಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಇದೇರೀತಿ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಗುರುವಾರ ಕೇವಲ ನಾಲ್ವರ ಸಮ್ಮುಖದಲ್ಲಿ ಜೋಡಿಯೊಂದು ಮದುವೆಯಾಗಿದೆ. ಇನ್ನು ಮೈಸೂರಿನಲ್ಲಿ ಜೋಡಿಯೊಂದು ಮಾಸ್ಕ್ ಧರಿಸಿಕೊಂಡು ಪ್ರೀವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿದ್ದರು.