ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಕರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆೆ ನೀಡಲು ಹಲವು ಖಾಸಗಿ ವೈದ್ಯರು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಮಾನವೀಯ ದೃಷ್ಟಿಯಿಂದ ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಮುಂದಾಗಿದ್ದು, ಕರೋನಾ ದಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಆಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸಲು ಮುಂದಾಗಿರುವ ವೈದ್ಯರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಾನವೀಯತೆ ಮೆರೆಯುತ್ತಿರುವ ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಅತ್ಯಂತ ಶ್ಲಾಘನೀಯ ಎಂದುದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಗರದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕಿತರಿಗೆ ಸೂಕ್ತ ಚಿಕಿತ್ಸೆೆ ನೀಡಲು ಶಿವಾಜಿನಗರದ ಬ್ರಾಡ್ವೇ ಆಸ್ಪತ್ರೆ ಸಜ್ಜಾಗಿದ್ದು, ಮುಂದಿನ ಎರಡು ವಾರಗಳಲ್ಲಿ 200 ಹಾಸಿಗೆಗಳ ಸೌಲಭ್ಯ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ಫೌಂಡೇಷನ್ನ ಡಾ. ಸುಧಾ ಮೂರ್ತಿ ಅವರ ನೇತೃತ್ವದಲ್ಲಿಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕೋವಿಡ್ ಕೇರ್ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ನೋವಿಗೆ ಮಿಡಿದಿರುವ ಇನ್ಫೋಸಿಸ್ ಸಂಸ್ಥೆಗೆ ರಾಜ್ಯ ಸರಕಾರ ಆಭಾರಿಯಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
|
|