Sunday, 15th December 2024

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಿ-ಎಚ್ಡಿಕೆ

 ಬೆಂಗಳೂರು: ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಕರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯ ಸರಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.