ವಿಶ್ವವಾಣಿ ಸುದ್ದಿಮನೆ
ಬೆಂಗಳೂರು
ಕಟ್ಟಡ ನಿರ್ಮಾಣ ಕೆಲಸ ಮಾಡಿಕೊಂಡು ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 616 ಅಂಕ ಪಡೆದ ಮಹೇಶ್ ಹಾಗೂ ಅವರ ಕುಟುಂಬದ ಸದಸ್ಯರನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಮಾಹಿತಿ ಪಡೆದು ನೇರವಾಗಿ ವಿದ್ಯಾರ್ಥಿ ಮಹೇಶ್ ಮನೆಗೆ ತೆರಳಿದ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿ ಮಹೇಶ್ಗೆ ಅಭಿನಂದನೆ ಸಲ್ಲಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ. ಮಹೇಶ್ ತಾಯಿ ಮಲ್ಲವ್ವನಿಗೂ ಧೈರ್ಯ ತುಂಬಿ ವಿದ್ಯಾಭ್ಯಾಸಕ್ಕೆ ಅಡ್ಡಿ ಮಾಡದಂತೆ ಮನವಿ ಮಾಡಿದ್ದಾರೆ.
ಮಹೇಶ್ ಮೂಲತಃ ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬವಾಗಿದ್ದು, ಇಂದಿರಾ ನಗರದ ಜೀವನ್ ಭೀಮಾ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಹೇಶ್ ವ್ಯಾಸಂಗ ಮಾಡಿದ್ದಾನೆ. ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡಿದ್ದಾರೆ. ಮಹೇಶ್ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡು ವಿದ್ಯಾಭ್ಯಾಸ ಮಾಡಿರುವುದಲ್ಲದೆ 616 ಅಂಕಗಳನ್ನು ಗಳಿಸುವ ಮೂಲಕ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದಾನೆ. ಈತನ ಸಾಧನೆಯನ್ನು ನೋಡಿ ನಿಮ್ಮ ಮನೆಗೆ ಬಂದಿದ್ದೇನೆ ಎಂದು ವಿದ್ಯಾರ್ಥಿ ಜತೆ ಸಂವಾದದ ಸಮಯದಲ್ಲಿ ತಿಳಿಸಿದರು.
ಮಹೇಶ್ ಮುಂದಿನ ವಿದ್ಯಾಭ್ಯಾಸವನ್ನು ಪಿಯುಸಿ ವಿಜ್ಞಾನ ವಿಷಯದಲ್ಲಿ ಮುಂದುವರೆಸಲು ಇಚ್ಛೆ ವ್ಯಕ್ತಪಡಿಸಿದರು. ಇದಕ್ಕೆ ಶಿಕ್ಷಣ ಸಚಿವರು ಸಕಾರಾತ್ಮವಾಗಿ ಸ್ಪಂದಿಸಿದು, ಉನ್ನತ ವ್ಯಾಸಂಗಕ್ಕೆ ಸಹಾಯ ಮಾಡುವ ಭರವಸೆಯನ್ನು ನೀಡಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗೆ ಶಿಕ್ಷಣ ಇಲಾಖೆಯಿಂದ ಅಭಿನಂದನೆ ಸಲ್ಲಿಸುವ ಮೂಲಕ ಇತರೆ ವಿದ್ಯಾಾರ್ಥಿಗಳಿಗೆ ಸ್ಪೂರ್ತಿಯನ್ನು ಹೆಚ್ಚಿಸಿದ್ದಾರೆ.
|
|