Saturday, 14th December 2024

ಕೆಪಿಸಿಸಿಯಿಂದ ವಿಷನ್ ಕರ್ನಾಟಕ ಸಮಿತಿ

*ಬೆಂಗಳೂರು*

ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ನಿಂದ ಆಗಿರುವ ಆರ್ಥಿಕ ಸಂಕಷ್ಟ ಎದುರಿಸುವ ಬಗ್ಗೆ ರೂಪುರೇಷೆಗಳನ್ನು ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ‘ವಿಷನ್ ಕರ್ನಾಟಕ’ ಸಮಿತಿ ರಚಿಸಿದ್ದಾರೆ.

ಕೆಪಿಸಿಸಿ ವತಿಯಿಂದ ರಚಿಸಲಾಗಿರುವ ಈ ಸಮಿತಿಗೆ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರು ಸಂಚಾಲಕರಾಗಿದ್ದಾರೆ. ಸದ್ಯ ದೇಶದಲ್ಲಿನ ಲಾಕ್ ಡೌನ್ ನಿಂದಾಗಿ ಎಲ್ಲ ಕ್ಷೇತ್ರಗಳಲ್ಲೂ ಭಾರೀ ಪ್ರಮಾಣದಲ್ಲಿ ಆರ್ಥಿಕ ಹೊಡೆತ ಬಿದ್ದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಇದು ತಂದೊಡ್ಡಬಹುದಾದ ಪ್ರತಿಕೂಲ ಪರಿಣಾಮಗಳನ್ನು ಬಗೆಹರಿಸುವ ಬಗ್ಗೆ ಸಲಹೆಗಳನ್ನು ನೀಡಲು ಈ ಸಮಿತಿಯನ್ನು ರಚಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.