ಬೆಳಗಾವಿ
ಕೋವಿಡ್-೧೯ ಸೋಂಕಿಗೆ ಒಳಗಾಗಿದ್ದ ೧೪ ಜನ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ.
ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಲ್ಲಿ ಈ ಬೆಳವಣಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ಮೂಡಿಸಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ತಾಲ್ಲೂಕಿನ ೧೪ ಜನರು ಗುಣಮುಖರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.