Friday, 13th December 2024

ಖಾಸಗಿ‌ ಆಸ್ಪತ್ರೆಗಳು ತೆರೆಯದಿದ್ದರೆ ಕ್ರಮ

ಬೆಂಗಳೂರು

ಸಾರ್ವಜನಿಕರಿಗೆ ವೈದ್ಯಕೀಯ ಸೇವೆಗಳು ಅತ್ಯಗತ್ಯವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆ, ನಸಿರ್ಂಗ್ ಹೋಂ, ಕ್ಲೀನಿಕ್ ಹಾಗೂ ಸ್ಕ್ಯಾನಿಂಗ್ ಮಾಡುವ ಲ್ಯಾಬೋರೇಟರಿಗಳು ಕಡ್ಡಾಯವಾಗಿ ತೆರೆಯಬೇಕು. ಇಲ್ಲದಿದ್ದಲ್ಲಿ, ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಕೊರೋನಾ ವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಖಾಸಗಿ ಆಸ್ಪತ್ರೆ, ನಸಿರ್ಂಗ್ ಹೋಂ, ಕ್ಲಿನಿಕ್ ಹಾಗೂ ಸ್ಕ್ಯಾನಿಂಗ್ ಮಾಡುವ ಲ್ಯಾಬೋರೇಟರಿಗಳು ಮುಚ್ಚಿ ಸೇವೆ ಸ್ಥಗಿತಗೊಳಿಸಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದ್ದು, ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿರುವ ಎಲ್ಲಾ ಖಾಸಗಿ ವೈದ್ಯರು ತಕ್ಷಣದಿಂದ ಸೇವೆಯನ್ನು ಆರಂಭಿಸಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಸ್ಕ್ಯಾನಿಂಗ್ ಮಾಡದೆ ಮುಚ್ಚಿರುವ ಲ್ಯಾಬೋರೇಟರಿಗಳ ವಿರುದ್ಧ ಪಿಸಿಪಿಎನ್‍ಡಿಟಿ ಕಾಯ್ದೆಯಡಿ ಪರವಾನಗಿ ರದ್ದು ಮಾಡಲಾಗುವುದು. ರದ್ದಾದ ಮಾಡಿದ ಪರವಾನಗಿ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.