Thursday, 12th December 2024

ಡಿಕೆಶಿ- ಪರಂ ಭೇಟಿ

ಬೆಂಗಳೂರು:

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ, ರಾಜ್ಯವನ್ನು ಕಂಗೆಡಿಸಿರುವ ಕೊರೊನಾ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದರು. ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ ಹತ್ತು ವರ್ಷಗಳ ಅನುಭವವಿರುವ ಪರಮೇಶ್ವರ್ ಅವರಿಂದ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಬಗ್ಗೆ ಸಲಹೆಗಳನ್ನು ಪಡೆದರು.