Wednesday, 30th October 2024

ಡಿ.ಜೆ ಹಳ್ಳಿ ವ್ಯಾಪ್ತಿಯಲ್ಲಿ ದಾಂಧಲೆ

ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವ ಘಟನೆ ಕಾವಲ್ ಬೈರಸಂದ್ರದಲ್ಲಿ ನಡೆದಿದೆ.

ಕಾರು ಸೇರಿ ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಟ್ಟಡದ ಮೇಲೆ ಏರಿ ಕಲ್ಲು, ಬಾಟಲಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಉದ್ರಿಕ್ತರ ಮೇಲೆ ಅಶ್ರುವಾಯು ಪ್ರಯೋಗಕ್ಕೆ ಮುಂದಾದ ಪೊಲೀಸರು. ಘಟನಾ ಸ್ಥಳಕ್ಕೆ ಖುದ್ದು ಭೇಟಿ ಕೊಟ್ಟಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪ್ರಯತ್ನ ಮಾಡುತ್ತಿದ್ದಾರೆ.