Saturday, 14th December 2024

ತಹಶೀಲ್ದಾಾರ್ ಹತ್ಯೆೆ ಖಂಡಿಸಿ ಸರಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ

ವಿಶ್ವವಾಣಿ ಸುದ್ದಿಮನೆ

ಬೆಂಗಳೂರು
ಬಂಗಾರಪೇಟೆ ತಾಲ್ಲೂಕು ತಹಶೀಲ್ದಾಾರ್‌ರಾಗಿದ್ದ ಬಿ.ಕೆ. ಚಂದ್ರಮೌಳೇಶ್ವರ ಹತ್ಯೆೆ ಹಿನ್ನೆೆಲೆಯಲ್ಲಿ ಕಠಿಣ ಕಾನೂನು ರೂಪಿಸಿ ಸರಕಾರಿ  ಅಧಿಕಾರಿ ನೌಕರರಿಗೆ ಅಗತ್ಯ ರಕ್ಷಣೆ ನೀಡುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ  ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.

ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿನ  ಗಾಂಧಿಪ್ರತಿಮೆ ಬಳಿ ಕಪ್ಪುಪಟ್ಟಿ ಧರಿಸಿ ಮೌನಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು ತಹಶೀಲ್ದಾಾರ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು. ರಾಜ್ಯಾದ್ಯಂತ ಸರಕಾರಿ  ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭಗಳಲ್ಲಿ ಇಂತಹ ಘಟನೆಗಳು ಆಂಗಿದಾಗ್ಗೆೆ  ಸಂಭವಿಸುತ್ತಿದ್ದು , ಅದರಲ್ಲಿ ಕಂದಾಯ, ಭೂಮಾಪನ, ಗ್ರಾಮೀಣಾಭಿವೃದ್ಧಿ ಮತ್ತು  ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ  ಸಿಬ್ಬಂದಿಗಳ ಮೇಲೆ ಇಂತಹ ಹಲ್ಲೆ ಹಾಗೂ ದೌರ್ಜನ್ಯಗಳು ನಡೆಯುತ್ತಿವೆ.

ರಾಜ್ಯ ಸರಕಾರದ  ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕಾರ್ಯಾಂಗ ಕ್ಷೇತ್ರದ ಅಧಿಕಾರಿ, ನೌಕರರ ವರ್ಗ ಆತಂಕ ಹಾಗೂ ಭಯದಿಂದ ಕರ್ತವ್ಯ ನಿರ್ವಹಿಸುವ ವಾತಾವರಣ ಸೃಷ್ಟಿಯಾಗುತ್ತಿವೆ. ರಾಜ್ಯದಲ್ಲಿ ಕಠಿಣ ಕಾನೂನುಗಳು ಜಾರಿಯಲ್ಲಿರದ ಕಾರಣ ಇಂತಹ ಕೃತ್ಯಗಳು ಮರುಕಳಿಸುತ್ತಿದ್ದು , ಇಂತಹ ಪರಿಸ್ಥಿತಿಗಳು ಮರುಕಳಿಸದಂತೆ ಕಠಿಣ ಕಾನೂನುಗಳನ್ನು ರಾಜ್ಯ  ಸರಕಾರ ರೂಪಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮನವಿ ಸಲ್ಲಿಸಿದರು.

ಮೃತರ  ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಬೇಕು. ಮುಖ್ಯಮಂತ್ರಿಗಳ ಪರಿಹಾರ  ನಿಧಿಯಿಂದ ರು.25 ಲಕ್ಷಗಳ ಪರಿಹಾರಧನ,  ಕುಟುಂಬದ ಸದಸ್ಯರೊಬ್ಬರಿಗೆ ಸರಕಾರಿ  ನೌಕರಿಯನ್ನು ನೀಡುವುದು  ಹಾಗೂ ಆರೋಪಿಗಳ ಮೇಲೆ ಕಾನೂನು ಅಡಿ ನಿರ್ದಾಕ್ಷಿಣ್ಯವಾಗಿ ಕ್ರಮ  ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸುವಂತೆ ಸರಕಾರಕ್ಕೆೆ ಸಂಘ ಆಗ್ರಹಿಸಿದರು.