Saturday, 14th December 2024

ದ್ವಿಚಕ್ರ ವಾಹನ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬೆಂಗಳೂರು,

ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದ ಇಬ್ಬru ಅಂತಾರಾಜ್ಯ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಪೇರಿಯಾಸ್ವಾಮಿ (20), ಹರೀಶ್ (21) ಬಂಧಿತ ಆರೋಪಿಗಳು. ಬಂಧಿತರಿಂದ 8 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.