Saturday, 14th December 2024

ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ: ಗೃಹಸಚಿವ

ವಿಶ್ವವಾಣಿ ಸುದ್ದಿಮನೆ

ಬೆಂಗಳೂರು:

ಪಾದರಾಯನಪುರದಲ್ಲಿ ಗಲಭೆ ಸೃಷ್ಠಿಸಲು ಕಾರಣರಾದ 119 ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈಗ ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.ಸು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಕ್ರಮ ಜರುಗಿಸುವಿರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ ಹಾಗೂ ಸಾಂಕ್ರಾಮಿಕ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಅಂತೆಯೇ, ಎಲ್ಲಾ ಹಾಟ್-ಸ್ಪಾಟ್ ಜಿಲ್ಲೆಗಳಲ್ಲೂ ಕೋವಿಡ್-19 ಕಂಟೈನ್‍ಮೆಂಟ್ ಝೊನ್‍ಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.