ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್.ಐ ಕಿರಣ್ ಕುಮಾರ್ ಆತ್ಮಹತ್ಯೆೆ ಪ್ರಕರಣದ ಬಗ್ಗೆ ಉನ್ನತಮಟ್ಟದ ತನಿಖೆ ವಹಿಸಬೇಕು ಎಂದು ಬಿಜೆಪಿ ಸರಕಾರವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.
ಕರೋನಾ ಸೊಂಕು ನಿಯಂತ್ರಣ ಉದ್ದೇಶದಿಂದ ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ. ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡಬೇಕೆಂದು ಟ್ವೀಟ್ ಮಾಡಿದ್ದಾರೆ.
ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ ಜಾಗಟೆ ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆೆ ಶರಣಾಗಿದೆ ಎಂದು ಟೀಕಿಸಿದ್ದಾರೆ.