ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:
ಜಪ್ತಿ ಮಾಡಿದ ಆಟೋವನ್ನು ಠಾಣೆಗೆ ತೆಗೆದುಕೊಂಡು ಹೋಗುತ್ತಿದ್ದ ಮುಖ್ಯಪೇದೆ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೀಣ್ಯ ಪೊಲೀಸ್ ಠಾಣೆ ಮುಖ್ಯ ಪೇದೆ ನಾಗೇಶ್ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಉತ್ತರ ವಿಭಾಗದ ಡಿಸಿಪಿ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ಆಟೋಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದರು. ಭಾನುವಾರ ಬೆಳಗ್ಗೆ ದಾಸರಹಳ್ಳಿ ಬಳಿ ಜಪ್ತಿಯಾದ ಆಟೋವನ್ನು ಠಾಣೆಯಿಂದ ಮಂಜುನಾಥ ನಗರಕ್ಕೆ ನಾಗೇಶ್ ತೆಗೆದುಕೊಂಡು ಹೋಗುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿದೆ. ಆಗ ಆದ ಅಪಘಾತದಲ್ಲಿ ನಾಗೇಶ್ ತಲೆಗೆ ಗಂಭೀರ ಗಾಯಾವಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ. ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.