Sunday, 27th October 2024

ಬೆಂಗಳೂರು ಜಲಮಂಡಳಿ ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು:

ಬೆಂಗಳೂರು ಜಲಮಂಡಳಿಯು ಶನಿವಾರದಂದು ಬೆಳಿಗ್ಗೆ 09:00 ರಿಂದ 10:30 ರವರೆಗೆ ತುಷಾರ್ ಗಿರಿನಾಥ್, ಭಾ.ಆ.ಸೇ., ಮಾನ್ಯ ಅಧ್ಯಕ್ಷರು, ಬೆಂಗಳೂರು ಜಲಮಂಡಳಿ ಇವರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ಸಂಬಂಧ ದಿನಾಂಕ:02.05.2020 ರಂದು ಬೆಳಿಗ್ಗೆ 09:00 ರಿಂದ 10:30 ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಲು ಈ ಫೋನ್-ಇನ್ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಲಾಗಿದೆ.