ಕೊಪ್ಪಳ:
ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲುಮಳೆ, ಭಾರಿ ಗಾಳಿಗೆ ನಾಶವಾದ ಭತ್ತ, ತೋಟಗಾರಿಕೆ ಬೆಳೆಗಳಿಗೆ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ರೂ. 45 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ.
ಕೊಪ್ಪಳ, ರಾಯಚೂರ ಭಾಗದಲ್ಲಿ ಕಟಾವಿಗೆ ಬಂದಿದ್ದ ಭತ್ತ, ಹಾಗೂ ತೋಟಗಾರಿಕೆ ಬೆಳೆಗಳು ಅಕಾಲಿಕ ಆಲಿಕಲ್ಲು ಮಳೆ ಮತ್ತು ಗಾಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿತ್ತು,
ಜಿಲ್ಲೆಯ ಗಂಗಾವತಿ, ಕನಕಗಿರಿ, ಕಾರಟಗಿ ಪ್ರದೇಶದಲ್ಲಿ ಸುಮಾರು 75 ಸಾವಿರ ಎಕರೆ ಭತ್ತ ನಾಶವಾಗಿತ್ತು,
ತಕ್ಷಣ ಸೂಕ್ತ ಪರಿಹಾರಕ್ಕೆ ಸಿಎಂ ಬಿಎಸ್. ಯಡಿಯೂರಪ್ಪ ಅವರನ್ನು ಕೃಷಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಸೋಮವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಒತ್ತಾಯಿಸಿದ್ದರು.
ಕೃಷಿ ಸಚಿವ ಬಿ ಸಿ ಪಾಟೀಲ್ ರು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಖುದ್ದು ಬೆಳೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿನೆ ಮಾಡಿ ಅಧಿಕಾರಿಗಳ ಸಭೆಯನ್ನು ನಡೆಸಿ ವರದಿ ಹಾನಿಯಾಗಿದ್ದರ ಬಗ್ಗೆ ವರದಿ ಸಿದ್ದಪಡಿಸಲು ಸೂಚಿಸಿದ್ದರು.
ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ನಾಶದ ಬಗ್ಗೆ ವರದಿ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿ ವಾಸ್ತವಿಕ ವರದಿಯನ್ನು ಗಮನಕ್ಕೆ ತಂದು, ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸೂಕ್ತ ಪರಿಹಾರವನ್ನು ನೀಡುವುಂತೆ ನಿಯೋಗವು ಮನವಿ ಮಾಡಿಕೊಂಡಿತು..
ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗೂರು ಹಾಗೂ ಹಾಲಪ್ಪ ಆಚಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ, ಮಾಜಿ ಶಾಸಕ ಜಿ. ವೀರಪ್ಪ, ಬೆಳೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಅವರಿದ್ದ ನಿಯೋಗ ಮನವಿಗೆ ಮುಖ್ಯ ಮಂತ್ರಿಗಳು ಸ್ಪಂದಿಸಿ ರೂ. 45 ಕೋಟಿ ಪರಿಹಾರವನ್ನು ಘೋಷಣೆ ಮಾಡಿರುವರು.
ಕೋಟ್..
ಇತ್ತೀಚೆಗೆ ಗಂಗಾವತಿ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಸುರಿದ ಅಕಾಲಿಕ ಭಾರಿ ಮಳೆಗಾಳಿಗೆ ದೊಡ್ಡ ಪ್ರಮಾಣದಲ್ಲಿ ಭತ್ತ ಹಾನಿಯಾಗಿದ್ದು ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸುಮಾರು 75 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಭತ್ತ ಹಾಗೂ 15ಸಾವಿರ ಎಕರೆಯಲ್ಲಿ ತೋಟಗಾರಿಕಾ ಬೆಳೆ ನಾಶವಾಗಿದೆ. ಸೂಕ್ತ ಪರಿಹಾರಕ್ಕೆ ಸಿಎಂ ಗೆ ಮಾಡಿಕೊಂಡ ಮನವಿಗೆ ಸ್ಪಂದಿಸಿ, 45 ಕೋಟಿ ಪರಿಹಾರದ ಭರವಸೆಯನ್ನು ನೀಡಿದ್ದಾರೆ.
ಸಂಗಣ್ಣ ಕರಡಿ, ಸಂಸದ, ಕೊಪ್ಪಳ