Thursday, 12th December 2024

ಮತ್ತೇ ಮೂರು ಲ್ಯಾಬ್‌ಗಳಿಗೆ ಅನುಮತಿ

ಬೆಂಗಳೂರು:
ಗದಗ, ತುಮಕೂರು ಮತ್ತು ವಿಜಯಪುರಗಳ ಕರೋನಾ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್-19 ಟೆಸ್ಟಿಂಗ್ ಲ್ಯಾಬ್‌ಗಳು ಕಾರ್ಯ ನಿರ್ವಹಿಸುವಂತಾಗಿದೆ.
ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಪ್ರಸ್ತುತ ಆರ್‌ಟಿ‌ಪಿ‌ಸಿ‌ಆರ್ ಲ್ಯಾಬ್ – 15, ಸಿ‌ಬಿ‌ಎನ್‌ಎ‍‍ಎ‍ಟಿ – 03 ಮತ್ತು ಖಾಸಗಿಯ 08 ಲ್ಯಾಬ್ ಗಳು ಕಾರ್ಯ ನಿರ್ವಹಿಸುತ್ತಿವೆ. ಫೆಬ್ರವರಿ ಆರಂಭದಲ್ಲಿ 2 ಲ್ಯಾಬ್‌ಗಳಿದ್ದ ಕರ್ನಾಟಕದಲ್ಲಿ ಈಗ 26 ಲ್ಯಾಬ್‌ಗಳು ಕಾರ್ಯನಿರ್ವಹಿಸುತ್ತಿದ್ದು ಮೇ ಅಂತ್ಯದೊಳಗೆ 60 ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸಲಿವೆ