Friday, 13th December 2024

ಮದ್ಯದ ಅಮಲಿನಲ್ಲಿ ವ್ಯಕ್ತಿ ಸಾವು

ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:

ಮದ್ಯದ ಅಮಲಿನಲ್ಲಿ ವ್ಯಕ್ತಿಯೋರ್ವ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಶ್ರೀರಾಮ ದೇವಾಲಯದ ಬಳಿ ನಡೆದಿದೆ. ಮೂರ್ತಿ (55) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.

ದೇವಸ್ಥಾನದ ಕಟ್ಟೆ ಬಳಿ ಮದ್ಯ ಸೇವಿಸಿ ಮನೆಯತ್ತ ತೆರಳುತ್ತಿದ್ದ ಮೂರ್ತಿ, ಏಕಾಏಕಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಸ್ಥಳೀಯರು ಕುಡಿದ ಮತ್ತಿನಲ್ಲಿ ಬಿದ್ದಿರಬಹುದೆಂದು ತಿಳಿದು ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ಆದರೆ, ಪೊಲೀಸರು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿರುವುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.