ಬೆಂಗಳೂರು:
ದೇಶದೆಲ್ಲೆಡೆ ಲಾಕ್ಡೌನ್ ಘೋಷಿಸಿರುವುದರಿಂದ ಎಷ್ಟೋ ಜನರಿಗೆ ಕೆಲಸವಿಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಹೀಗಾಗಿ, ದೆಹಲಿ ಸರಕಾರ ತನ್ನ ರಾಜ್ಯದ ಜನರಿಗೆ 3 ತಿಂಗಳ ಮನೆ ಬಾಡಿಗೆ ಹಣವನ್ನು ಕೊಡುವ ಯೋಜನೆಯನ್ನು ರೂಪಿಸಿದೆ. ಅದೇರೀತಿ ದೇಶಾದ್ಯಂತ ಬಾಡಿಗೆ ಮನೆಯಲ್ಲಿರುವವರ 3 ತಿಂಗಳ ಬಾಡಿಗೆ ಹಣವನ್ನು ಭರಿಸುವ ಯೋಜನೆ ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಲಾಕ್ಡೌನ್ ಅವಧಿಯಲ್ಲಿ ಬಾಡಿಗೆ ವಿನಾಯಿತಿ ಘೋಷಿಸಿವೆ. ದೆಹಲಿಯ ಸರಕಾರ ಮೂರು ತಿಂಗಳ ಬಾಡಿಗೆಯನ್ನು ಕೊಡುವ ಯೋಜನೆ ಘೋಷಿಸಿದೆ. ಇದೇ ರೀತಿ ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿ ಘೋಷಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ದೇಶದಲ್ಲಿ ಆರ್ಥಿಕ ಚಟುವಟಿಕೆ ಪೂರ್ತಿ ಸ್ಥಗಿತಗೊಂಡಿದೆ. ಇಂತಹ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಅಂತ ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾಗುತ್ತದೆ. ಕೇಂದ್ರ ಸರಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿನಂತಿಸಿಕೊಂಡಿದ್ದಾರೆ.