Tuesday, 26th November 2024

ಮೆಡಿಕಲ್ ಕಾಲೇಜು ಸಿಬ್ಬಂದಿ ಬೇಡಿಕೆ ಈಡೇರಿಸುವ ಭರವಸೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಹಾಗೂ ಸಿಬ್ಬಂದಿಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ, ಕಪ್ಪು ಪಟ್ಟಿ ಧರಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಟ್ಟು ಕರೋನಾ ರೋಗಿಗಳ ಚಿಕಿತ್ಸೆ ಹಾಗೂ ಅವರ ಆರೋಗ್ಯದ ಬಗ್ಗೆ ಗಮನ ಹರಿಸಿ ಎಂದು ಡಾ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನಿಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ
ಕೈಗೊಳ್ಳುತ್ತೇವೆ. ಸರಕಾರ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸಿದ್ದವಿದ್ದು ಪ್ರತಿಭಟನೆಯನ್ನು ನಿಲ್ಲಿಸಿ. ಕರೋನಾ ಸೋಂಕು ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸರಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಗುತ್ತಿಗೆ ನೌಕರರ ಪ್ರತಿಭಟನೆ ನಡೆಸಿದಾಗ ಸರಕಾರ ಬೇಡಿಕೆ ಈಡೇರಿಕೆಗೆ ಸಮ್ಮತಿ ಸೂಚಿಸಿತ್ತು. ಅದರಂತೆ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಂಡಿತ್ತು. ಆದರೀಗ ಸರಕಾರದ ಸಿಬ್ಬಂದಿಗಳೇ ಕೋವಿಡ್ ಸಮಯದಲ್ಲಿ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿರುವುದು ಪ್ರತಿಭಟನೆಗೆ ಮುಂದಾಗಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.