Saturday, 14th December 2024

ಮೇ17 ರಿಂದ ಬಿಎಂಟಿಸಿ ಬಸ್ ಸಂಚಾರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಲಾಕ್‌ಡೌನ್‌ನಿಂದಾಗಿ ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಬಿಎಂಟಿಸಿ ಸಂಚಾರವನ್ನು ಮೇ17 ರ ನಂತರ ಕಾರ್ಯಾಚರಣೆ ಮಾಡುವ ಸಾಧ್ಯತೆಗಳವೆ.

ಈಗಾಗಲೇ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲ ಮಾಡಿದ್ದು ಬೆಳಗ್ಗೆಯಿಂದ ಸಂಜೆವರೆಗೆ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕೆಲ ತುರ್ತು ಸೇವೆಯನ್ನು ಹೊರತು ಪಡಿಸಿದರೆ ಬಿಎಂಟಿಸಿ ಸೇವೆ ಆರಂಭವಾಗಿಲ್ಲ. ಮೇ 17ರ ನಂತರ ಲಾಕ್‌ಡೌನ್ ಮತ್ತಷ್ಟು ಸಡಿಲವಾಗಿ ಬಿಎಂಟಿಸಿ ಸಂಚಾರಕ್ಕೆ ಅವಕಾಶ ಸಿಗುವ ಸಾಧ್ಯತೆಗಳಿರುವುದರಿಂದ ಎಲ್ಲ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

48 ದಿನಗಳ ಲಾಕ್‌ಡೌನ್ ಬಳಿಕ ಬಿಎಂಟಿಸಿಯ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಸೂಚಿಸಿರುವುದಲ್ಲದೆ, ಸಾರಿಗೆ ಸಂಸ್ಥೆಯು ತುರ್ತು ಸೇವೆಗೆ ಒಳಪಡುವುದರಿಂದ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಹಾಗೂ ಕೆಲಸಕ್ಕೆ ಹಾಜರಾಗುವ ಮುನ್ನ ಸಿಬ್ಬಂದಿ ಮೆಡಿಕಲ್ ಸರ್ಟಿಫಿಕೆಟ್ ತರಬೇಕು. ಶಾಂತಿನಗರ ಆಸ್ಪತ್ರೆ ವೈದ್ಯರಿಂದ ತಪಾಸಣೆಗೆ ಒಳಗಾಗಿ ಪರೀಕ್ಷಾ ಪ್ರಮಾಣ ಪತ್ರ ತರಬೇಕು ಎಂದು ಆದೇಶಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಶಾಂತಿನಗರ ಆಸ್ಪತ್ರೆಯ ಮುಂಭಾಗದಲ್ಲಿ ನಿರ್ವಾಹಕರು, ಚಾಲಕರು ಸಾಲುಗಟ್ಟಿ ನಿಂತಿದ್ದ ದೃಶ್ಯನಗರದಲ್ಲಿ ಕಂಡುಬಂದಿತ್ತು.