Sunday, 24th November 2024

ಯುಎಇ‌ ಕನ್ನಡಿಗರ ಜತೆ ಸಿಎಂ ವಿಡಿಯೋ ಸಂವಾದ

ಬೆಂಗಳೂರು:

ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ 19 ನಿಂದ ತೊಂದರೆಗೀಡಾದ ಯುನೈಟೆಡ್ ‌ಅರಬ್ ಎಮಿರೇಟ್ಸ್ ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ವೀಡಿಯೋ ಸಂವಾದ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ‌ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಯು.ಎ.ಇ. ಯಲ್ಲಿ  ತೊಂದರೆಗೆ  ಸಿಲುಕಿರುವ ಅನಿವಾಸಿ ಕನ್ನಡಿಗರನ್ನು ಮರಳಿ ರಾಜ್ಯಕ್ಕೆ ಕರೆತರುವ ಪ್ರಯತ್ನವನ್ನು ಸರ್ಕಾರ ಈಗಾಗಲೇ ಮಾಡಿದೆ.
ವೀಸಾ ಅವಧಿ ಮುಗಿದ  ನಿರೋದ್ಯೋಗಿಗಳು, ರೋಗಿಗಳು ಇತರೆ ಕಾರಣಗಳಿಂದ ವಾಪಸ್ ಬರಲಾಗದೆ ಸಂಕಷ್ಟಕ್ಕೆ ಸಿಲುಕಿರುವವರನ್ನು ತಾಯ್ನಾಡಿಗೆ ಕರೆತರಲು ಸರ್ಕಾರ ವ್ಯವಸ್ಥೆ ಮಾಡಿದೆ.
ಕನ್ನಡಿಗರನ್ನು ಕರ್ನಾಟಕಕ್ಕೆ ವಾಪಸ್ ಕರೆತರಲು ವಿಮಾನದ ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಶೇಷ ವಿಮಾನಯಾನದ ವ್ಯವಸ್ಥೆ ಮಾಡಿರುತ್ತಾರೆ.
ಅನಿವಾಸಿ ಕನ್ನಡಿಗರ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಎಲ್ಲಾ ಪ್ರಯತ್ನ ಮಾಡಲಿದೆ.
ಯು.ಎ.ಇ. ಯಿಂದ ಹಿಂದಿರುಗಿ ಬರುವ ಎಲ್ಲರೂ 14 ದಿನಗಳ ಕಾಲ ಕ್ವಾರೆಂಟೈನ್‍ಗೆ ಒಳಪಡಲು ಸರಕಾರದ ಜೊತೆಗೆ ಸಂಪೂರ್ಣ ಸಹಕಾರ ನೀಡಬೇಕು.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ ಹೊಟೇಲ್‍ಗಳಲ್ಲಿ ಕ್ವಾರಂಟೈನ್‍ಗೆ ಈಗಾಗಲೇ ವ್ಯವಸ್ಥೆ ಕಲ್ಪಿಸಲಾಗಿದೆ.
ಮಂಗಳೂರಿನಲ್ಲಿಯೂ ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್ ಮಾಡಲು ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ.
ಇನ್ನೂ ಹೆಚ್ಚಿನ ಸೌಲಭ್ಯ ಇರುವ ಹೊಟೇಲ್‍ಗಳಲ್ಲಿ ಕ್ವಾರಂಟೈನ್ ಆಗುವ ಇಚ್ಛೆ ಇದ್ದವರು ತಾವೇ ಹಣ ಪಾವತಿಸಿ ಇರಬಹುದು.
ತೊಂದರೆಗೆ ಸಿಲುಕಿರುವ ಕನ್ನಡಿಗರು ಆತಂಕಕ್ಕೆ ಒಳಗಾಗದೆ, ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸಬೇಕು. ಸರ್ಕಾರ ನಿಮ್ಮೊಂದಿಗಿದೆ.
ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲು ಹಾಗೂ ಅವರ ನೆರವಿಗೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡುತ್ತೇನೆ.
ಅಲ್ಲಿಯೇ ಉಳಿದುಕೊಂಡಿರುವ ಕನ್ನಡಿಗರೂ ಸಹ ಹತಾಶರಾಗದೆ ದೃಢ ಮನಸ್ಸಿನಿಂದ ಪರಿಸ್ಥಿತಿಯನ್ನು ಎದುರಿಸಿ.
ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ.
ಕರ್ನಾಟಕದಲ್ಲಿರುವ ನಿಮ್ಮ ಬಂಧು-ಬಳಗದ ಯೋಗಕ್ಷೇಮ ನಮ್ಮ ಜವಾಬ್ದಾರಿ.
ಇದಕ್ಕಾಗಿ ನಮ್ಮ ಸರ್ಕಾರ ಹಗಲು-ಇರುಳು ಶ್ರಮಿಸುತ್ತಿದೆ.
ಶೀಘ್ರವೇ ಈ ಕರೋನಾ ಸಂಕಷ್ಟದಿಂದ ಪಾರಾಗುವ ಆಶಾ ಭಾವ ನಮ್ಮದಾಗಲಿ.
ನಿಮಗೆ ತೊಂದರೆ ತೊಡಕುಗಳೇನಾದರೂ ಎದುರಾದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದು ಅದನ್ನು ನಿವಾರಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುವುದು.
ಅಂತೆಯೇ ರಾಜ್ಯ ಸರ್ಕಾರ ತನ್ನ ಹಂತದಲ್ಲಿ ಕೈಗೊಳ್ಳಬಹುದಾದ ಕ್ರಮಗಳನ್ನೂ ಕೈಗೊಳ್ಳಲಿದೆ ಅಂತ ಹೇಳಿದರು

ದುಬೈ ಕನ್ನಡಿಗರ ಬೇಡಿಕೆಗಳು
ದುಬೈ ನಿಂದ ಬರುವವರಿಗೆ ಕೂಡಲೇ ಪ್ಲೈಟ್ ವ್ಯವಸ್ಥೆ ಮಾಡಬೇಕು

ಅದರಲ್ಲೂ ‌ಮಂಗಳೂರಿಗೆ ಹೆಚ್ಚಿನ ಪ್ಲೈಟ್ ವ್ಯವಸ್ಥೆ ಮಾಡಬೇಕು

ಈಗಾಗಲೇ ಯು.ಎ.ಇ‌ ನಲ್ಲಿ ಸಾಕಷ್ಟು ಜನ ನಿರುದ್ಯೋಗಿಗಳಾಗಿದ್ದಾರೆ ರಾಜ್ಯಕ್ಕೆ ಬರಲು ಸಾಧ್ಯವಾಗದೇ ಇದ್ದವರೆಗೆ ಆರ್ಥಿಕ ವಾಗಿ ನೆರವಾಗಬೇಕು

ತುಂಬ ಕೆಳವರ್ಗದ ಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಉಚಿತ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕು

ಇವಿಷ್ಟು ಸೇರಿದಂತೆ ‌ಇತರೆ ಬೇಡಿಕೆಗಳಿಗೆ ಮಾನ್ಯ ಮುಖ್ಯಮಂತ್ರಿ ಗಳು ಬಗೆಹರಿಸುವುದಾಗಿ ಭರವಸೆ ನೀಡಿದರು