ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:
ರಾಜ್ಯದಲ್ಲಿ ಗುರುವಾರ 18 ಮಂದಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ.
ಒಂದೇ ದಿನ ಬೆಂಗಳೂರಿನಲ್ಲಿ 10 ಜನರಿಗೆ ಕರೋನಾ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಬುಧವಾರ ಬೆಂಗಳೂರಿನ ಇಬ್ಬರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಬೆಂಗಳೂರಿನ ಹೊಂಗಸಂದ್ರದ ಬಿಹಾರ ಮೂಲಕ ಕಾರ್ಮಿಕ (ರೋಗಿ ನಂಬರ್ 419) ಸಿಲಿಕಾನ್ ಸಿಟಿಗೆ ಕಂಟಕವಾಗುತ್ತಾ ಎನ್ನುವ ಅನುಮಾನಗಳು ದಟ್ಟವಾಗಿವೆ. ಕೂಲಿ ಕಾರ್ಮಿಕನ ಸಂಪರ್ಕದಲ್ಲಿದ್ದ 9 ಜನರಿಗೆ ಇಂದು ಕರೋನಾ ತಗುಲಿರುವುದು ದೃಢಪಟ್ಟಿದೆ. ತಡರಾತ್ರಿ ಕಾರ್ಯಚರಣೆ ನಡೆಸಿದ ಆರೋಗ್ಯ ಜಲ್ಲಾಧಿಕಾರಿಗಳು 118 ಜನರನ್ನು ಕ್ವಾರಂಟೈನ್ ಮಾಡಿದ್ದಾರೆ.
ನಂಜನಗೂಡಿನ ರೋಗಿ ನಂಬರ್ 52ರಂತೆ ಬಿಹಾರ ಕಾರ್ಮಿಕ ಬೆಂಗಳೂರಿಗೆ ಕಂಟಕವಾಗುವ ಸಾಧ್ಯತೆಗಳಿವೆ. ಸೋಂಕು ತಗುಲಿದ ಬಳಿಕ ಕಾರ್ಮಿಕ ಆಟೋದಲ್ಲಿ ಹೊಂಗಸಂದ್ರದ ವೇಣು ಕ್ಲಿನಿಕ್, ಜಯದೇವ ಆಸ್ಪತ್ರೆ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಿಗೆ ತೆರಳಿದ್ದಾನೆ.
ಕರೋನಾ ಪೀಡಿತ ಒಟ್ಟು 283 ವ್ಯಕ್ತಿಗಳಲ್ಲಿ, 278 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿನ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯವು ಸ್ಥಿರವಾಗಿದೆ. ಇನ್ನುಳಿದ ಐದು ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ. ರಾಜ್ಯದಲ್ಲಿ ಪತ್ತೆ ಮಾಡಲಾಗಿರುವ 445 ಪ್ರಕರಣಗಳಲ್ಲಿ 9 ಪ್ರಕರಣಗಳು ಕೇರಳದವರಾಗಿರುತ್ತಾರೆ. ಅವರು ಕರ್ನಾಟಕದ ವಿಮಾನ ನಿಲ್ದಾಣಗಳ ಮೂಲಕ ಕೇರಳಕ್ಕೆ ಪ್ರಯಾಣಿಸುತ್ತಿರುವಾಗ ಪತ್ತೆ ಮಾಡಿ, ಅವರಿಗೆ ಕರ್ನಾಟಕದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
…….
ಬಾಕ್ಸ್…..
ಔಷಧಿ ನೀಡುವಾಗ ಅವರ ವಿವರ ಪಡೆಯಲು ಸೂಚನೆ
ಕರ್ನಾಟಕದ ಎಲ್ಲಾ ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆಯ ಫಾರ್ಮಸಿಸ್ ಅವರು ಔಷಧಿ ಕೊಡುವಾಗ ಆಡ್ರೆಸ್, ಮೊಬೈಲ್ ನಂಬರ್ ಕಲೆಕ್ಟ್ ಮಾಡಲು ಸೂಚನೆ ಕೊಡಲಾಗಿದೆ. ಕೆಮ್ಮು, ನಗಡಿ, ಗಂಟಲಿ ನೋವಿಗೆ ಕೊಡುವಾಗ ಕಲೆಕ್ಟ್ ಮಾಡಬೇಕು. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವರದಿ ಮಾಡಬೇಕು ಎಂದು ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
………….
ಹೊಂಗಸಂದ್ರದಲ್ಲಿ ಕರೋನಾ ಹೊಗೆ ಶುರು
ಬೆಂಗಳೂರಿನ ಹೊಂಗಸಂದ್ರದ ಬಿಹಾರ ಮೂಲದ ಕಾರ್ಮಿಕನಿಂದ 11 ಜನರಿಗೆ ಸೋಂಕು ಹರಡಿರುವುದು ಪತ್ತೆಯಾಗಿದೆ. ಅಲ್ಲದೇ 150 ಜನರೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ರಾಜಧಾನಿಗೆ ಈ ಕಾರ್ಮಿಕ ತಲೆನೋವಾಗಿ ಪರಿಣಮಿಸಿದ್ದಾರೆ.
ಬೆಂಗಳೂರಿನ ಹೊಂಗಸಂದ್ರದಲ್ಲಿರುವ ಬಿಹಾರ ಕಾರ್ಮಿಕರೊಬ್ಬರು ಇತ್ತೀಚೆಗೆ ಉಸಿರಾಟದ ತೊಂದರೆ ಅನುಭವಿಸುತ್ತಿದ್ದರು. ಸಮೀಪದ ವೇಣು ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಈ ಆಸ್ಪತ್ರೆಯವರು ಈತನನ್ನು ಜಯದೇವ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದರು. ಅಲ್ಲಿ ಇವರನ್ನು ವಿಕ್ಟೋರಿಯಾಗೆ ತೆರಳಿ ಕರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದರು. ವಿಕ್ಟೋರಿಯಾದಲ್ಲಿ ಪರೀಕ್ಷೆಗೊಳಪಡಿಸಿದಾಗ ರಾಜೀವ್ ಗಾಂದಿ ಆಸ್ಪತ್ರೆಯಲ್ಲಿ ಮತ್ತೆ ಪರೀಕ್ಷೆಗೊಳಪಡುವಂತೆ ಸೂಚಿಸಲಾಯಿತು. ಆಗ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಹಿರಿಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
…….
ಬೆಂಗಳೂರಿನಲ್ಲಿ ಶತಕ ಬಾರಿಸಿದ ಕರೋನಾ
ಬೆಂಗಳೂರಿನ ಹೊಂಗಸಂದ್ರದಲ್ಲಿ ಗುರುವಾರ ಒಂದೇ ದಿನ 11 ಮಂದಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ನಗರದಲ್ಲಿ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಬುಧವಾರ 54 ವರ್ಷದ ಬಿಹಾರದ ಕಾರ್ಮಿಕನಿಗೆ ಸೋಂಕು ತಗುಲಿತ್ತು. ಅವರು ವಾಸವಿದ್ದ ಕೊಳಗೇರಿ ಪ್ರದೇಶದಲ್ಲಿ ನೂರಾರು ಮಂದಿ ನೆಲೆಸಿದ್ದರು. ಅವರೊಂದಿಗೆ ನೇರ ಸಂಪರ್ಕ ಹೊಂದಿದ್ದವರಲ್ಲಿ 11 ಮಂದಿಗೆ ಸೋಂಕು ಹರಡಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿತರೆಲ್ಲರೂ ಪುರುಷರಾಗಿದ್ದು, 45 ವರ್ಷದೊಳಗಿನವರಾಗಿದ್ದಾರೆ. ಅವರೊಂದಿಗೆ ನೇರ ಹಾಗೂ ಪರೋಕ್ಷ ಸಂಪರ್ಕ ಹೊಂದಿದ್ದ 100ಕ್ಕೂ ಅಧಿಕ ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಿ, ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೊಂಗಸಂದ್ರವನ್ನು ಸೀಲ್ ಡೌನ್ ಮಾಡಿ, ಸೋಂಕು ನಿವಾರಕವನ್ನು ಸಿಂಪಡಿಸಿದ್ದಾರೆ. ನಗರದಲ್ಲಿ ಪಾದರಾಯನಪುರದಲ್ಲಿ ಅತೀ ಹೆಚ್ಚು (17) ಕರೋನಾ ಪ್ರಕರಣಗಳು ವರದಿಯಾಗಿವೆ. ದೊಡ್ಡಬಸ್ತಿಯನ್ನು ಸೀಲ್ ಡೌನ್ ಮಾಡಲಾಗಿದೆ.