ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ. ಎಸ್. ನಾಗಾಭರಣ ರವರ ನೇತೃತ್ವದಲ್ಲಿ ರಂಗಭೂಮಿ ಹಿತೈಷಿ ಬಳಗವು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಸಿ. ಟಿ. ರವಿರವರನ್ನು ಇಂದು ಕುಮಾರ ಕೃಪ ಅತಿಥಿ ಗೃಹದಲ್ಲಿ ಬೇಟಿ ಮಾಡಿ ಕರೋನ ಲಾಕಡೌನಿಂದ ಸಂಕಷ್ಟದಲ್ಲಿರುವ ರಾಜ್ಯದ ಕಲಾವಿದರಿಗೆ ಆರ್ಥಿಕ ನೆರವು ಒದಗಿಸಲು ಮನವಿ ಸಲ್ಲಿಸಲಾಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದ ಸಮಿತಿಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಕಷ್ಟದಲ್ಲಿರುವ ಸುಮಾರು 1737 ಕಲಾವಿದರ ಪಟ್ಟಿಯನ್ನು ಸಿದ್ದಪಡಿಸಿ ಮನವಿಯೊಂದಿಗೆ ಸಲ್ಲಿಸಲಾಯಿತು. ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ. ಮುರಳಿಧರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಶ್ರೀ ಎಸ್. ರಂಗಪ್ಪರವರು, ಜಾನಪದ ಪರಿಷತ್ತಿನ ಅಧ್ಯಕ್ಷರಾದ ಶ್ರೀ ತಿಮ್ಮಯ್ಯ ನಿವೃತ್ತ ಐಎಎಸ್ ಅಧಿಕಾರಿ, ಹಾಜರಿದ್ದರು. ಮಾನ್ಯ ಸಚಿವರು ರಾಜ್ಯದ ಕಲಾವಿದರಿಗೆ ಆರ್ಥಿಕ ಸಹಾಯ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.