ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:
ಸಣ್ಣ ಕೈಗಾರಿಕೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಆರ್ಥಿಕ ನೆರವು ಘೋಷಣೆ ಇದ್ದಲ್ಲಿ ಸಣ್ಣ ಕೈಗಾರಿಕೆಗಳು ಮುಚ್ಚುವ
ಅಪಾಯ ಎದುರಾಗುತ್ತದೆ ಎಂದು ಪೀಣ್ಯ ಕೈಗಾರಿಕಾ ಪ್ರದೇಶದ ಅಧ್ಯಕ್ಷ ಶ್ರೀನಿವಾಸ ಅಸ್ರಣ್ಣ ಕಳವಳ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಾಕ್ಡೌನ್ ಆಗಿ 48 ದಿನಗಳಾದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಣ್ಣ ಮತ್ತು ಅತೀ ಸಣ್ಣ ಹಾಗೂ ಮದ್ಯಮ ಕೈಗಾರಿಕೆಗಳಿಗೆ ಯಾವುದೇ ಸಹಾಯಧನಕ್ಕೆ ಮುಂದಾಗದೇ ಇರುವುದು ವಿಷಾದದ ಸಂಗತಿ. ಲಾಕ್ಡೌನ್ ಮುಂದುವರೆದರೆ ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳು ಸಂಪೂರ್ಣವಾಗಿ ಮುಚ್ಚುವ ಹಂತಕ್ಕೆ ತಲುಪಲಿವೆ ಎಂದರು.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 8500 ಕಂಪನಿಗಳಿದ್ದು ಸಾವಿರಾರು ಉದ್ಯಮಿಗಳು ಲಾಕ್ಡೌನ್ನಿಂದಾಗಿ ಎಲ್ಲಾ ಕಾರ್ಖಾನೆಗಳು ಮತ್ತು ಎಲ್ಲಾಾ ವಹಿವಾಟುಗಳು ನಿಂತು, ಉದ್ಯಮಿದಾರರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದು, ಬ್ಯಾಾಂಕ್ ಮತ್ತು ಇನ್ನಿತರೆ ಮೂಲಗಳಿಂದ ತೆಗೆದುಕೊಂಡಿರುವ ಸಾಲವನ್ನು ಮರುಪಾವತಿ ಮಾಡಲಾಗದೆ ಪರದಾಡುತ್ತಿದ್ದಾರೆ. ಇದರಿಂದಾಗಿ ಕಾರ್ಮಿಕರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಉದ್ಯಮಿಗಳ ಸಹಾಯಕ್ಕೆ ಮುಂದಾಗಬೇಕಾಗಿದೆ ಎಂದಿದ್ದಾರೆ.
ದೇಶದಲ್ಲಿಯೇ ಉದ್ಯೋಗ ನೀಡುವುದರಲ್ಲಿ ಸಣ್ಣ ಮತ್ತು ಅತೀ ಸಣ್ಣ ಕೈಗಾರಕೆಗಳು ಎರಡನೇ ಸ್ಥಾನದಲ್ಲಿದ್ದು, ಸರಕಾರಗಳು ಈ ಕಡೆ ಗಮನ ಹರಿಸದಿದ್ದರೆ ಉದ್ಯಮಗಳು ಮುಚ್ಚಿ ಹೋಗಿ ರಾಷ್ಟ್ರದ ಅಭಿವೃದ್ದಿಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಎಂ.ಎಂ.ಗಿರಿ, ಹಿರಿಯ ಉಪಾಧ್ಯಕ್ಷ ಪಿ.ಪ್ರಕಾಶ್, ಉಪಾಧ್ಯಕ್ಷ ಪ್ರಾಣೇಶ್,
ಕಾರ್ಯದರ್ಶಿ ವಿಜಯಕುಮಾರ್, ಉಪಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಮಂಜುನಾಥ್. ಎಚ್, ಜಂಟಿ ಖಜಾಂಚಿ ಮುರುಳಿಕೃಷ್ಣ ಇದ್ದರು.