ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಭಾನುವಾರ ಸಂಜೆ ಕೋವಿಡ್ ವರದಿ ಬಂದಿದ್ದು, ನನಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಕುರಿತು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ರವಾನಿಸಿರುವ ಅವರು, ಆಸ್ಪತ್ರೆಯಲ್ಲಿದ್ದುಕೊಂಡು ಸರಕಾರಿ ಕೆಲಸ ಕಾರ್ಯಗಳನ್ನು ಮುಂದುವರೆಸಿದ್ದು, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ, ಸಲಹೆ ಸೂಚನೆಗಳನ್ನು ನೀಡಿದ್ದೇನೆ. ಯಾರೂ ಆತಂಕ ಮತ್ತು ಗಾಬರಿಗೊಳ್ಳುವ ಅಗತ್ಯವಿಲ್ಲ ನಾನು ಆರಾಮವಾಗಿದ್ದೇನೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕರೋನಾ ನಿಯಂತ್ರಿಸಲು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕರೋನಾ ಸೋಂಕು ಧೃಡಪಟ್ಟು ಆಸ್ಪತ್ರೆಗೆ ದಾಖಲಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರು ಕರೆ ಮಾಡಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ದೇವೇಗೌಡರು, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿಗಳು, ಸಚಿವರು ಹಾಗೂ ಕೋಟ್ಯಾಾಂತರ ಕಾರ್ಯಕರ್ತರ ಆಶೀರ್ವಾದ ಹಾಗೂ ಹಾರೈಕೆಯಿಂದ ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಬಿಡುಗಡೆಯಾಗುವ ವಿಶ್ವಾಸವನ್ನು ಯಡಿಯೂರಪ್ಪ ಅವರು ವ್ಯಕ್ತಪಡಿಸಿದ್ದಾರೆ.
|
|